Saturday 10th, May 2025
canara news

ದಿವಂಗತ ರಾಜೀವ್ ಗಾಂಧಿ ಮತ್ತು ದೇವರಾಜ್ ಅರಸರವರ ಜನ್ಮ ದಿನಾಚರಣೆ - ಬ್ಲಾಕ್ ಕಾಂಗ್ರೆಸ್ ಕುಂದಾಪುರ.

Published On : 21 Aug 2017   |  Reported By : Bernard J Costa


ಮಾಜಿ ಪ್ರಧಾನಿ ರಾಜೀವ್ ಗಾಂಧಿ ಮತ್ತು ಮಾಜಿ ಮುಖ್ಯಮಂತ್ರಿ ದೇವರಾಜ್ ಅರಸರವರ ಜನ್ಮ ದಿನಾಚರಣೆಯನ್ನು ಕುಂದಾಪುರ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಭಾನುವಾರದಂದು ಆಚರಿಸಲಾಯಿತು.


ಮುಖ್ಯ ಅತಿಥಿಯಾಗಿ ಆಗಮಿಸಿದ ಕೆ.ಪಿ.ಸಿ.ಸಿ ಕಾರ್ಯದರ್ಶಿ ಎಮ್.ಎಸ್ ಮಹಮ್ಮದ್ರವರು ದೇಶದ ತಂತ್ರಜ್ಞಾನ ಇಂದು ವಿಶ್ವದಲ್ಲೇ ಮಂಚೂಣಿಯಲ್ಲಿರಲು ಪ್ರಧಾನಿ ರಾಜೀವ್ ಗಾಂಧಿ ಈ ಹಿಂದೆ ಹಾಕಿದ ಬುನಾದಿಯ ಕಾರಣವೆಂದರು.

ಸಭೆಯ ಅಧ್ಯಕ್ಷತೆಯನ್ನು ವಹಿಸಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಯಾಡಿ ಶಿವರಾಂ ಶೆಟ್ಟಿ ,ಮಾಜಿ ಮುಖ್ಯಮಂತ್ರಿ ದಿವಂಗತ ದೇವರಾಜ್ ಅರಸರ ಆಡಳಿತದಲ್ಲಿ ತೆಗೆದುಕೊಂಡ ಮಹತ್ವದ ನಿರ್ದಾರಗಳು ಇಂದು ದೇಶದಲ್ಲಿ ಭೂಮಿಯ ಪಾಲು ಎಲ್ಲರಿಗೂ ಸಿಗುವಂತಾಯಿತು ಎಂದರು. ಸಭೆಯಲ್ಲಿ ನಗರ ಕಾಂಗ್ರೆಸ್ ಅಧ್ಯಕ್ಷ ಗಣೇಶ್ ಶೇರಿಗಾರ್,ನಾಮನಿರ್ದೇಶಿತ ಸದಸ್ಯರಾದ ಚಂದ್ರ ಅಮಿನ್ ,ಉಡುಪಿ ಯುವ ಕಾಂಗ್ರೆಸ್ ಕಾರ್ಯದರ್ಶಿಯಾದ ರಮೇಶ್ ಶೆಟ್ಟಿ ,ಶೋಭಾ ಸಚ್ಚಿದಾನಂದ, ಕೆ.ಸುರೇಶ್, ಶಶಿ ಕಾಂಚನ್ ,ಶಿವಾನಂದ.ಕೆ ,ಮತ್ತಿತ್ತರು ಉಪಸ್ಥಿತರಿದ್ದರು.

ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ನಾರಾಯಣ್ ಆಚಾರ್ಯ ಸ್ವಾಗತಿಸಿ ,ನಗರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿನೋದ್ ಕ್ರಾಸ್ಟೋ ವಂದಿಸಿದರು.




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here