Friday 19th, April 2024
canara news

ಮಂಗಳೂರಿನ ಕದ್ರಿ ಪಾರ್ಕಿನಲ್ಲಿ ಮತ್ತೆ ಓಡಲಿದೆ ಪುಟಾಣಿ ರೈಲು

Published On : 22 Aug 2017   |  Reported By : Canaranews Network


ಮಂಗಳೂರು: ಮಂಗಳೂರಿನ ಕದ್ರಿ ಪಾರ್ಕ್ ನಲ್ಲಿ ಕಳೆದ 5 ವರ್ಷಗಳಿಂದ ಸ್ಥಗಿತಗೊಂಡಿದ್ದ ಮಕ್ಕಳ ಪುಟಾಣಿ ಚುಕು-ಬುಕು ರೈಲು ಬಾಲ ಮಂಗಳ ಎಕ್ಸ್ಪ್ರೆಸ್ ಮತ್ತೆ ಓಡುವ ದಿನಗಳು ಸನ್ನಿಹಿತವಾಗಿವೆ.ಕಳೆದ 5 ವರ್ಷಗಳಿಂದ ಇದು ಸ್ಥಗಿತಗೊಂಡಿದ್ದು, ಜನಪ್ರತಿನಿಧಿ ಹಾಗೂ ಅಧಿಕಾರಿಗಳ ನಿರಾಸಕ್ತಿಯಿಂದ ಮೂಲೆ ಸೇರಿದ್ದ ಈ ಪುಟಾಣಿ ರೈಲು ಮಕ್ಕಳ ಚಿಲಿಪಿಲಿ ಯೊಂದಿಗೆ ಮತ್ತೆ ಹಳಿಯ ಮೇಲೆ ಓಡಲಿದೆ.

ಶನಿವಾರ ಮಂಗಳೂರು ದಕ್ಷಿಣ ಶಾಸಕರಾದ ಜೆ.ಆರ್.ಲೋಬೊರವರು ಪುಟಾಣಿ ರೈಲು ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಜೆ.ಆರ್. ಲೋಬೋ, "ಕದ್ರಿ ಪಾರ್ಕ್ ನ ಸಮಗ್ರ ಅಭಿವೃದ್ಧಿಗೆ ಈಗಾಗಲೇ ಹಲವಾರು ಯೋಜನೆಗಳನ್ನು ಹಾಕಿಕೊಂಡಿದ್ದು ಅಭಿವೃದ್ಧಿ ಕಾಮಗಾರಿಗಳು ಪ್ರಗತಿಯಲ್ಲಿದೆ," ಎಂದು ಹೇಳಿದರು.ಬೆಂಗಳೂರಿನ ಕಬ್ಬನ್ ಪಾರ್ಕ್ ನಲ್ಲಿ ಸಂಚರಿಸುತ್ತಿದ್ದ ಈ ಹಳೇ ರೈಲನ್ನೇ ಕದ್ರಿ ಪಾರ್ಕ್ಗೆ ತರಲಾಗಿತ್ತು. ಕೇವಲ ಎರಡು ಬೋಗಿಗಳು ಇರುವ ಈ ರೈಲು 1975ರಲ್ಲಿ ತಯಾರಿಸಲಾಗಿದೆ.

 




More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here