Friday 19th, April 2024
canara news

ಶರತ್ ಶವಯಾತ್ರೆ ವೇಳೆ ಕಲ್ಲುತೂರಾಟ, ಹಿಂದು ಮುಖಂಡರಿಗೆ ತಾತ್ಕಾಲಿಕ ರಿಲೀಫ್

Published On : 22 Aug 2017   |  Reported By : Canaranews Network


ಮಂಗಳೂರು: ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಶವಯಾತ್ರೆ ಸಂದರ್ಭ ನಡೆದ ಕಲ್ಲು ತೂರಾಟ ಮತ್ತು ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಪೊಲೀಸರು ದಾಖಲಿಸಿದ್ದ ಎಫ್ಐಆರ್ ಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.ಸತ್ಯಜಿತ್ ಸುರತ್ಕಲ್ ಸೇರಿ ಐವರು ಹಿಂದೂ ಮುಖಂಡರ ವಿರುದ್ಧ ಬಂಟ್ವಾಳ ಪೊಲೀಸರು ಎಫ್ಐಆರ್ ದಾಖಲಿಸಿದ್ದರು.

ತಮ್ಮ ವಿರುದ್ಧ ದಾಖಲಿಸಿದ್ದ ಎಫ್ಐಆರ್ ಗೆ ಹಾಗೂ ವಿಚಾರಣೆಗೆ ತಡೆಯಾಜ್ಞೆ ನೀಡುವಂತೆ ಕೋರಿ ಹಿಂದು ಪರ ಸಂಘಟನೆ ಮುಖಂಡರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ಬಂಟ್ವಾಳ ಜೆಎಂಎಫ್ಸಿ ಕೋರ್ಟ್ ನಲ್ಲಿ ನಡೆಯಲಿರುವ ವಿಚಾರಣೆಗೆ ಹಾಗೂ ಎಫ್ಐಆರ್ ಗೆ ಮಧ್ಯಂತರ ತಡೆ ನೀಡಿ ಆಗಸ್ಟ್ 26ಕ್ಕೆ ವಿಚಾರಣೆ ಮುಂದೂಡಿದೆ. ಕಳೆದ ಜುಲೈ 7ರಂದು ಮೃತಪಟ್ಟಿದ್ದ ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಶವಯಾತ್ರೆ ನಡೆಯುತ್ತಿದ್ದ ವೇಳೆ ಗಲಭೆ ನಡೆದಿತ್ತು. ಜುಲೈ 4 ರಂದು ಶರತ್ ಮಡಿವಾಳ ಹತ್ಯೆಗೆ ಯತ್ನಿಸಿದ್ದು ಗಂಭೀರ ಗಾಯಗೊಂಡಿದ್ದ ಅವರು ಜುಲೈ 7ರಂದು ಆಸ್ಪತ್ರೆಯಲ್ಲಿ ನಿಧನರಾಗಿದ್ದರು.

 




More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here