Saturday 10th, May 2025
canara news

ಮಂಗಳೂರು ಜಿಲ್ಲಾ ಕಾರಾಗೃಹ ಆವರಣಕ್ಕೆ ಪೊಟ್ಟಣ ಎಸೆದು ಪರಾರಿ

Published On : 22 Aug 2017   |  Reported By : Canaranews Network


ಮಂಗಳೂರು: ಮಂಗಳೂರು ಜಿಲ್ಲಾ ಕಾರಾಗೃಹದ ಒಳ ಭಾಗಕ್ಕೆ ಹೊರಗಿನ ರಸ್ತೆಯ ಭಾಗದಿಂದ ಆಹಾರ ಮತ್ತು ಇತರ ಪೊಟ್ಟಣಗಳನ್ನು ಎಸೆಯುವ ಪ್ರಕ್ರಿಯೆ ಈಗಲೂ ಮುಂದುವರಿದಿದೆ. ರವಿವಾರ ಮೇಯರ್ ಕವಿತಾ ಸನಿಲ್ ಅವರು ತಮ್ಮ ಕಾರಿನಲ್ಲಿ ಜೈಲ್ ರಸ್ತೆಯಲ್ಲಿ ಪ್ರಯಾಣಿಸುತ್ತಿದ್ದಾಗ ಅವರ ಎದುರಿನಲ್ಲಿಯೇ ಬೈಕಿನಲ್ಲಿ ಬಂದ ಒಬ್ಬ ವ್ಯಕ್ತಿ ಹಳೆಯ ಜೈಲಿನ ಆವರಣಕ್ಕೆ ಪ್ಲಾಸ್ಟಿಕ್ ತೊಟ್ಟೆಯಲ್ಲಿ ಯಾವುದೋ ವಸ್ತುವನ್ನು ಎಸೆದಿದ್ದಾನೆ. ಮೇಯರ್ ಅವರು ಕೂಡಲೇ ಆತನನ್ನು ಬೆನ್ನಟ್ಟಿ ಗುರುತು ಪತ್ತೆ ಹಚ್ಚಲು ಯತ್ನಿಸಿದರೂ ಸಾಧ್ಯವಾಗಿಲ್ಲ. ಆತ ಓಡಿ ಪರಾರಿಯಾಗಿದ್ದಾನೆ. ಈ ಹಿನ್ನೆಲೆಯಲ್ಲಿ ಮೇಯರ್ ಅವರು ಬಳಿಕ ವಿಷಯವನ್ನು ಪೊಲೀಸ್ ಆಯುಕ್ತರ ಗಮನಕ್ಕೆ ತಂದಿದ್ದಾರೆ.


ಜಿಲ್ಲಾ ಕಾರಾಗೃಹದ ಹಳೆಯ ಮತ್ತು ಹೊಸ ಜೈಲು ಕಟ್ಟಡಗಳೆರಡರಲ್ಲಿಯೂ ವಿಚಾರಣಾಧೀನ ಕೈದಿಗಳಿದ್ದಾರೆ. ಪೊಲೀಸರು ಆಗಿಂದಾಗ್ಗೆ ದಾಳಿ ನಡೆಸುತ್ತಿದ್ದು, ಆಗ ಕೈದಿಗಳ ಸೆಲ್ಗಳಿಂದ ಗಾಂಜಾ, ಮೊಬೈಲ್ ಫೋನ್, ಚಾರ್ಜರ್, ಚೂರಿ, ಚಾಕು ಇತ್ಯಾದಿಗಳು ಪತ್ತೆಯಾಗುವುದು ಸಾಮಾನ್ಯ. ಜೈಲಿನ ಒಳಗಿರುವ ಕೈದಿಗಳಿಗೆ ಮೊಬೈಲ್, ಗಾಂಜಾ ಮತ್ತಿತರ ವಸ್ತುಗಳು ಹೇಗೆ ಸಿಗುತ್ತವೆ ಎನ್ನುವುದಕ್ಕೆ ರವಿವಾರ ಮೇಯರ್ ಸಮಕ್ಷಮ ನಡೆದ ಘಟನೆ ಸಾಕ್ಷಿಯಾಗಿದೆ. ಜೈಲಿನ ಆವರಣ ಗೋಡೆ ಸುಮಾರು 30 ಅಡಿ ಎತ್ತರವಿದ್ದು, ಮೇಲ್ಗಡೆ ಅದಕ್ಕೆ ವಿದ್ಯುತ್ ತಂತಿ ಬೇಲಿ ಇದೆ. ಕೈದಿಗಳ ಸಹಚರರು ಅಥವಾ ಹಿತೈಷಿಗಳು ಹೊರಗಿನ ರಸ್ತೆಯಲ್ಲಿ ನಿಂತು ಗಾಂಜಾ ಮತ್ತು ಮೊಬೈಲ್ ಎಸೆಯುತ್ತಿರುವ ಬಗ್ಗೆ ಈ ಹಿಂದೆ ಜೈಲಿನ ಅಧಿಕಾರಿಗಳು ಒಪ್ಪಿಕೊಂಡಿದ್ದಾರೆ. ಮೇಯರ್ ಸ್ವತಃ ನೀಡಿರುವ ದೂರಿಗೆ ಸಂಬಂಧಿಸಿ ಪೊಲೀಸರು ಯಾವ ಕ್ರಮ ಜರಗಿಸುತ್ತಾರೆ ಎನ್ನುವುದನ್ನು ಕಾದು ನೋಡಬೇಕಿದೆ.

 

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here