Friday 4th, July 2025
canara news

ಪ್ರಭಾಕರ್ ಭಟ್ ವಿರುದ್ಧದ ವಿಚಾರಣೆಗೆ ಹೈ ಕೋರ್ಟ್ ತಡೆಯಾಜ್ಞೆ

Published On : 25 Aug 2017   |  Reported By : Canaranews network


ಮಂಗಳೂರು: ಪ್ರಚೋದನಕಾರಿ ಭಾಷಣ ಮಾಡಿ ಕೋಮು ಗಲಭೆಗೆ ಕಾರಣವಾದ ಆರೋಪದಲ್ಲಿ ಆರೆಸ್ಸೆಸ್ ಮುಖಂಡ ಡಾ.ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಅಧೀನ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆಗೆ ಹೈ ಕೋರ್ಟ್ ತಡೆಯಾಜ್ಞೆ ನೀಡಿದೆ.ಪ್ರಕರಣದಲ್ಲಿ ತಮ್ಮ ವಿರುದ್ಧ ವಿಚಾರಣೆಗೆ ರಾಜ್ಯ ಗೃಹ ಇಲಾಖೆ ಕಾರ್ಯದರ್ಶಿ ನೀಡಿದ್ದ ಪೂರ್ವಾನುಮತಿ ಮತ್ತು ಬೆಳ್ತಂಗಡಿ ಸಿವಿಲ್ ಜೆಎಂಎಫ್ ನ್ಯಾಯಾಲಯ ನೀಡಿದ್ದ ಸಮನ್ಸ್ ರದ್ದು ಕೋರಿ ಕಲ್ಲಡ್ಕ ಪ್ರಭಾಕರ್ ಭಟ್ ಹೈ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.

ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅರವಿಂದ ಕುಮಾರ್ ಅವರಿದ್ದ ಪೀಠವು ಮುಂದಿನ ಆದೇಶದವರೆಗೆ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಬೆಳ್ತಂಗಡಿ ಸಿವಿಲ್ ಜೆಎಂಎಫ್ ಸಿ ನ್ಯಾಯಾಲಯದ ವಿಚಾರಣೆಗೆ ತಡೆಯಾಜ್ಞೆ ನೀಡಿತು.ಜತೆಗೆ ಅರ್ಜಿಯ ಸಂಬಂಧ ರಾಜ್ಯ ಗೃಹ ಇಲಾಖೆ ಕಾರ್ಯದರ್ಶಿ ಅಧೀನ ಕಾರ್ಯದರ್ಶಿ ಮತ್ತು ಬಂಟ್ವಾಳ ನಗರ ಠಾಣಾಧಿಕಾರಿಗಳಿಗೆ ನೋಟಿಸ್ ಜಾರಿಗೊಳಿಸಿ, ವಿಚಾರಣೆ ಮುಂದೂಡಿದೆ.

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here