Saturday 10th, May 2025
canara news

ಪ್ರಾಚೀನ ತುಳುನಾಡಿನಲ್ಲಿ ಪ್ರತಿಷ್ಠಿತ ಬಂಟ ಮನೆತನದ ಗುತ್ತಿನ ಚಾವಡಿಯಲ್ಲಿ ನ್ಯಾಯ ತೀರ್ಮಾನ ನಡೆಸುವ ಪದ್ಧತಿ ಜಾರಿಯಲ್ಲಿತ್ತು-ಅಬ್ದುಲ್ ರಶೀದ್

Published On : 26 Aug 2017   |  Reported By : Rons Bantwal


ಮುಂಬಯಿ, ಆ.26: ಪ್ರಾಚೀನ ತುಳುನಾಡಿನಲ್ಲಿ ಪ್ರತಿಷ್ಠಿತ ಬಂಟ ಮನೆತನದ ಗುತ್ತಿನ ಚಾವಡಿಯಲ್ಲಿ ನ್ಯಾಯ ತೀರ್ಮಾನ ನಡೆಸುವ ಪದ್ಧತಿ ಜಾರಿಯಲ್ಲಿತ್ತು. ಗುತ್ತಿನ ಯಜಮಾನ ತೆಗೆದುಕೊಂಡ ನಿಷ್ಪಕ್ಷಪಾತದ ತೀರ್ಮಾನ ಸರ್ವರ ಮೆಚ್ಚುಗೆಗೆ ಪಾತ್ರವಾಗುತ್ತಿತ್ತು. ದ.ಕ. ಜಿಲ್ಲೆಯಲ್ಲಿ ಧರ್ಮಧರ್ಮದ ನಡುವೆ ಇತ್ತೀಚೆಗೆ ಹದಗೆಡುತ್ತಿರುವ ಸೌಹಾರ್ದಯುತ ಸಂಬಂಧ ಮತ್ತೆ ಮರುಸ್ಥಾಪಿಸಲು ಈ ಹಿಂದಿನ ವ್ಯವಸ್ಥೆಯೇ ಜಾರಿಗೆ ಬರುವ ಅನಿವಾರ್ಯತೆ ಇದೆ ಎಂದು ಉಳ್ಳಾಲ ಸಯ್ಯದ್ ಮದನಿ ದರ್ಗಾ ಸಮಿತಿ ಅಧ್ಯಕ್ಷ ಹಾಜಿ ಅಬ್ದುಲ್ ರಶೀದ್ ಹೇಳಿದರು.

ಹಾಜಿ ರಶೀದ್ ಅವರು ಶ್ರೀ ಸಿದ್ಧಿವಿನಾಯಕ ಪ್ರತಿಷ್ಠಾನ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ಮಂಗಳೂರಿನ ಬಂಟ್ಸ್ ಹಾಸ್ಟೆಲ್‍ನ ಓಂಕಾರನಗರದಲ್ಲಿ ನಡೆಯುತ್ತಿರುವ ಸಾರ್ವಜನಿಕ ಶ್ರೀ ಗಣೇಶೋತ್ಸವದ ಧಾರ್ಮಿಕ ಸಭೆಯ ಮುಖ್ಯ ಅತಿಥಿüಯಾಗಿದ್ದು ಮಾತನಾಡಿದರು.

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಇದರ ಕಾರ್ಯಾಧ್ಯಕ್ಷ ರಾಜ್ ಕಿರಣ್ ಜಿ.ರೈ ಮಾತನಾಡಿ, ಪ್ರಪಂಚದಾದ್ಯಂತ ಶ್ರೀ ಗಣೇಶನನ್ನು ಆರಾಧಿಸಲಾಗುತ್ತಿದ್ದು, ಗಣೇಶೋತ್ಸವದ ಕಾರ್ಯಕ್ರಮದಲ್ಲಿ ಸರ್ವಧರ್ಮೀಯರನ್ನು ಒಗ್ಗೂಡಿಸುವ ಮೂಲಕ ಶ್ರೀ ಗಣೇಶ ಸರ್ವರೂ ಸೇರಿ ಆರಾಧಿಸುವ ದೇವರಾಗಿದ್ದಾರೆ ಎಂದು ಹೇಳಿದರು.

ಕೂಳೂರು ಚರ್ಚ್‍ನ ಧರ್ಮಗುರು ರೆ| ಫಾ| ವಿನ್ಸೆಂಟ್ ಡಿ'ಸೋಜ ಶುಭಾರೈಸಿ, ಸಾರ್ವಜನಿಕ ಗಣೇಶೋತ್ಸವದಿಂದ ಈಶಸೇನೆ, ದೇಶಸೇನೆ ಹಾಗೂ ಕಲಾಸೇನೆ ಎಂಬ ನಾಲ್ಕು ಬಗೆಯ ಸೇನಾ ಕಾರ್ಯಗಳು ನಡೆಯುತ್ತಿರುವುದು ಪ್ರಶಂಸನೀಯ ಎಂದರು.

ಸಹ್ಯಾದ್ರಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಮಂಜುನಾಥ ಭಂಡಾರಿ, ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರಡಾ. ಮಂಜಯ್ಯ ಶೆಟ್ಟಿ ಬಂಟರ ಮಾತೃ ಸಂಘದ ಪದಾಧಿಕಾರಿಗಳಾದ ವಸಂತ ಶೆಟ್ಟಿ, ರವೀಂದ್ರನಾಥ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ರಾಜ್ ಕಿರಣ್ ಜಿ.ರೈ, ಮಾಡವೀ ಮೋಟರ್ಸ್‍ನ ಆಡಳಿತ ನಿರ್ದೇಶಕ ಆರೂರು ಸಂಜಯರಾವ್, ಮನೋಹರ ಶೆಟ್ಟಿ, ಡಾ| ಮಹಮ್ಮದ್ ಇಕ್ಬಾಲ್, ಪತ್ರಕರ್ತ ರೊನಾಲ್ಡ್ ಫೆರ್ನಾಂಡೀಸ್, ಡಾ| ಸದಾನಂದ ಪೆರ್ಲ, ಜೀವನ್‍ರಾಮ್ ಸುಳ್ಯ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಶ್ರೀ ಸಿದ್ದಿವಿನಾಯಕ ಪ್ರತಿಷ್ಠಾನದ ಮೆನೇಜಿಂಗ್ ಟ್ರಸ್ಟಿ ಅಜಿತ್ ಕುಮಾರ್ ರೈ ಮಾಲಾಡಿ ಸ್ವಾಗತಿಸಿದರು. ಮಂಜುಳ ಶೆಟ್ಟಿ ಮತ್ತು ಪ್ರಕಾಶ್ ಮೇಲಾಂಟ ಕಾರ್ಯಕ್ರಮ ನಿರ್ವಹಿಸಿದರು. ಪ್ರಧಾನ ಕಾರ್ಯದರ್ಶಿ ದಿವಾಕರ ಸಾಮಾನಿ ವಂದಿಸಿದರು.

 

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here