Saturday 10th, May 2025
canara news

ಸುಬ್ರಹ್ಮಣ್ಯ-ಧರ್ಮಸ್ಥಳ ರಾಜ್ಯ ಹೆದ್ದಾರಿಯ ಕಿರುಸೇತುವೆ ಜಲಾವೃತ

Published On : 29 Aug 2017   |  Reported By : Canaranews Network


ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂರು ದಿನಗಳಿಂದ ಭಾರೀ ಮಳೆ ಸುರಿಯುತ್ತದೆ. ಜಿಲ್ಲೆಯ ಸುಳ್ಯ, ಬೆಳ್ತಂಗಡಿ, ಪುತ್ತೂರು, ಬಂಟ್ವಾಳ ಸೇರಿದಂತೆ ಮಂಗಳೂರಿನಾದ್ಯಂತ ಭಾರಿ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದ.ಈ ಮಧ್ಯೆ ಧರ್ಮಸ್ಥಳ ಹಾಗೂ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನವನ್ನು ಸಂಪರ್ಕಿಸುವ ರಾಜ್ಯ ಹೆದ್ದಾರಿಯ ನೆಟ್ಟಣ ಎಂಬಲ್ಲಿ ಕಿರು ಸೇತುವೆ ಜಲಾವೃತಗೊಂಡಿದೆ.

ಈ ಹಿನ್ನೆಲೆಯಲ್ಲಿ ರಸ್ತೆ ಸಂಚಾರಕ್ಕೆ ತೊಡಕುಂಟಾಗಿದೆ.'ಮುಳುಗು ಸೇತುವೆ'ಯೆಂದೇ ಗುರುತಿಸಲಾಗುವ ಹಲವಾರು ಜೀವಗಳನ್ನು ಬಲಿ ತೆಗೆದುಕೊಂಡಿರುವ ಉಪ್ಪಿನಂಗಡಿ - ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಹೊಸ್ಮಠ ಸೇತುವೆಯು ಜಲಾವೃತಗೊಂಡು ಮುಳುಗಡೆಗೊಂಡಿದೆ.ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರಸಕ್ತ ವರ್ಷದಲ್ಲಿ ಸೇತುವೆ ಎರಡನೇ ಸಲ ಮುಳುಗಡೆಗೊಂಡಿದ್ದು, ಸಾರ್ವಜನಿಕರು ಸಂಕಷ್ಟ ಎದುರಿಸಬೇಕಾಗಿದೆ. ಸಂಜೆ ಕೆಲಸ ಬಿಟ್ಟು ಮನೆಗೆ ತೆರಳುತ್ತಿದ್ದ ವಿವಿಧ ಸಂಸ್ಥೆಗಳ ನೌಕರರು, ಶಾಲಾ ವಿದ್ಯಾರ್ಥಿಗಳು ಸೇರಿದಂತೆ ಅಪಾರ ಜನರು ನೆಲ್ಯಾಡಿ, ಇಚಿಲಂಪಾಡಿ ಮೂಲಕ ಸುತ್ತುಬಳಸಿ ಪ್ರಯಾಣಿಸಿದರು.

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here