Saturday 10th, May 2025
canara news

ಪೇಜಾವರ ಶ್ರೀ, ಭಾಗವತ್, ಕಲ್ಲಡ್ಕರಿಂದ ಹಿಂದೂ ಧರ್ಮ ಉಳಿದಿಲ್ಲ: ದಿನೇಶ್ ಅಮೀನ್ ಮಟ್ಟು

Published On : 29 Aug 2017   |  Reported By : Canaranews Network


ಮಂಗಳೂರು: ಪೇಜಾವರ ಶ್ರೀ, ಮೋಹನ್ ಭಾಗವತ್, ಕಲ್ಲಡ್ಕ ಪ್ರಭಾಕರ್ ಭಟ್ ಹಿಂದೂ ಧರ್ಮದ ಸುಧಾರಕರಾಗಿದ್ದಲ್ಲಿ ಅಸ್ಪೃಶ್ಯತೆ, ಮೂಢನಂಬಿಕೆಗಳ ವಿರುದ್ಧ ಯಾಕೆ ಮಾತನಾಡುತ್ತಿಲ್ಲ ಎಂದು ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರ ದಿನೇಶ್ ಅಮೀನ್ ಮಟ್ಟು ಪ್ರಶ್ನಿಸಿದ್ದಾರೆ.

ಮಂಗಳೂರು ಸಹೋದಯ ಸಭಾಂಗಣದಲ್ಲಿ ಭಾನುವಾರ ಸಂಜೆ ನಡೆದ ಡಿವೈಎಫ್ಐ ಮಂಗಳೂರು ನಗರ 11ನೇ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಅವರು, "ಸ್ವಾಮಿ ವಿವೇಕಾನಂದ, ನಾರಾಯಣ ಗುರುಗಳಂಥವರಿಂದ ಹಿಂದೂ ಧರ್ಮ ಉಳಿದಿದೆ. ಪೇಜಾವರಶ್ರೀ, ಮೋಹನ್ ಭಾಗವತ್ ಅಥವಾ ಕಲ್ಲಡ್ಕ ಪ್ರಭಾಕರ ಭಟ್ ಅಂಥವರಿಂದ ಅಲ್ಲ. ಹಿಂದೂ ಅನ್ನುವುದು ಒಂದು ಧರ್ಮವಲ್ಲ, ಅದು ಜಾತಿಗಳ ಒಕ್ಕೂಟ," ಎಂದರು.

ಇಂದು ದೇಶದಲ್ಲಿ ಹೊಸ ಭರವಸೆಯ ಬೆಳಕು ಕಾಣುತ್ತಿದೆ. ಅನೇಕ ಜನಪರ ಚಳವಳಿಗಳು ರೂಪುಗೊಳ್ಳುತ್ತಿವೆ. ಗುಜರಾತ್ನಲ್ಲಿ ನಡೆದ ರಾಜ್ಯಸಭಾ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ ತೀರ್ಪು ಮತ್ತು ಅತ್ಯಾಚಾರಿ ನಕಲಿ ಸ್ವಾಮಿಯ ವಿರುದ್ಧ ನ್ಯಾಯಾಲಯ ನೀಡಿದ ತೀರ್ಪು ಜನರನ್ನು ಹೊಸ ದಿಕ್ಕಿನತ್ತ ಕೊಂಡೊಯ್ಯುವ ಬೆಳಕಾಗಿ ಪರಿಣಮಿಸಿದೆ," ಎಂದು ದಿನೇಶ್ ಅಮೀನ್ ಮಟ್ಟು ಅಭಿಪ್ರಾಯಪಟ್ಟರು.




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here