Friday 4th, July 2025
canara news

ಮಂಗಳೂರು ಕಾರಾಗೃಹಕ್ಕೆ ಗಾಂಜಾ ಪೂರೈಕೆ ಯತ್ನ, ಮೂವರ ಬಂಧನ

Published On : 29 Aug 2017   |  Reported By : Canaranews Network


ಮಂಗಳೂರು: ಮಂಗಳೂರು ಜಿಲ್ಲಾ ಕಾರಾಗೃಹಕ್ಕೆ ಗಾಂಜಾ ಪೂರೈಕೆ ಮಾಡಲು ಯತ್ನಿಸುತಿದ್ದ 3 ಜನರನ್ನು ಪೊಲೀಸರು ಬಂಧಿಸಿದ್ದಾರೆ.ಬಂಧಿತರನ್ನು ಅಶೋಕ ನಗರ ಗುರುಂಪೆ ನಿವಾಸಿ ರಿತೇಶ್ (21), ಪುತ್ತೂರು ಕೆಮ್ಮಿಂಜೆ ನಿವಾಸಿ ರವಿ ಪೂಜಾರಿ (23), ಕುಂಜತ್ತೂರು ನಿವಾಸಿ ರಾಜೇಶ್ (29) ಎಂದು ಗುರುತಿಸಲಾಗಿದೆ.

ಬಂಧಿತರು ಜೈಲಿನ ಹೊರಬದಿಯಿಂದ ಗಾಂಜಾ ಪೂರೈಕೆಗೆ ಯತ್ನಿಸುತ್ತಿದ್ದರು ಎಂದು ಆರೋಪಿಸಲಾಗಿದೆ. ಜೈಲಿನ ಗೋಡೆಯ ಮೂಲಕ ಬಿಸಾಕಿ ಗಾಂಜಾ ಪೂರೈಕೆಗೆ ಸ್ಕೆಚ್ ಹಾಕುತ್ತಿದ್ದರು ಎಂದು ಹೇಳಲಾಗಿದೆ.ಗಾಂಜಾ ಹಿಡಿದುಕೊಂಡು ಹೊರಗೆ ಅಂಗಡಿಯೊಂದರ ಬಳಿ ನಿಂತಿದ್ದ ಆರೋಪಿಗಳನ್ನು ಪೊಲೀಸರು ಮಾಲು ಸಮೇತ ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಕದ್ರಿ ಠಾಣಾ ಪೊಲೀಸರು ಕಾರ್ಯಾಚರಣೆ ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತರಿಂದ 3500ರೂ. ಮೌಲ್ಯದ 250 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಬಂಧಿತ ಆರೋಪಿಗಳು ವಿವಿಧ ಪ್ರಕರಣಗಳಲ್ಲಿ ಈ ಹಿಂದೆ ಜೈಲುವಾಸಿಗಳಾಗಿದ್ದರು ಎಂದು ಹೇಳಲಾಗಿದೆ.ಈ ಕುರಿತು ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here