Saturday 20th, April 2024
canara news

ಬೆಳ್ತಂಗಡಿಯಲ್ಲಿ ಯುವಕರಿಬ್ಬರಿಗೆ ಥಳಿತ, ಮರುಕಳಿಸಿದ ನೈತಿಕ ಪೊಲೀಸ್ ಗಿರಿ

Published On : 03 Sep 2017   |  Reported By : Canaranews network


ಮಂಗಳೂರು: ಹಿಂದೂ ಕಾಲೇಜು ವಿದ್ಯಾರ್ಥಿನಿ ಜತೆ ಮಾತನಾಡುತ್ತಿದ್ದ ಇಬ್ಬರು ಮುಸ್ಲಿಂ ಸಮುದಾಯದ ಯುವಕರಿಗೆ ಥಳಿಸಿದ ಘಟನೆ ದಕ್ಷಿಣ ಕನ್ನಡದ ಬೆಳ್ತಂಗಡಿ ತಾಲೂಕಿನಲ್ಲಿ ಶನಿವಾರ ನಡೆದಿದೆ.

ಚಿಕ್ಕಮಗಳೂರಿನಿಂದ ಬಂದಿದ್ದ ಮುಸ್ಲಿಂ ಯುವಕರಿಬ್ಬರು ಪರಿಚಿತ ಕಾಲೇಜು ವಿದ್ಯಾರ್ಥಿನಿಯರ ಜತೆ ಮಾತನಾಡುತ್ತಿದ್ದರು. ಇವರಲ್ಲಿ ಒಬ್ಬ ವಿದ್ಯಾರ್ಥಿನಿ ಮುಸ್ಲಿಂ ಹಾಗೂ ಇನ್ನೊಬ್ಬಳು ಹಿಂದೂ ಧರ್ಮಕ್ಕೆ ಸೇರಿದವರಾಗಿದ್ದರು.ಭೇಟಿ ವೇಳೆ ಯುವಕರು ಹಾಗೂ ಯುವತಿಯರು ಫೋಟೋ ತೆಗೆದುಕೊಳ್ಳುತ್ತಿದ್ದರು. ಇದನ್ನು ನೋಡಿದ ಗುಂಪೊಂದು ಈ ಸಂದರ್ಭ ಯುವಕರ ಮೇಲೆ ದಾಳಿ ನಡೆಸಿದೆ.

ಚಿಕ್ಕಮಗಳೂರಿನ ಮಹಮ್ಮದ್ ಉನೈಸ್ ಮತ್ತು ಯೂಸುಫ್ ಹಲ್ಲೆಗೊಳಗಾದ ಯುವಕರಾಗಿದ್ದಾರೆ.ಹಲ್ಲೆ ನಡೆದ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಇದೀಗ ಹಲ್ಲೆ ನಡೆಸಿದ ಆರೋಪದ ಮೇಲೆ ಇಬ್ಬರನ್ನು ಬೆಳ್ತಂಗಡಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು.ದಕ್ಷಿಣ ಕನ್ನಡದಲ್ಲಿ ಇತ್ತೀಚೆಗೆ ನೈತಿಕ ಪೊಲೀಸ್ ಗಿರಿಗಳ ಸಂಖ್ಯೆ ಕಡಿಮೆಯಾಗಿತ್ತು. ಇದೀಗ ಮತ್ತೆ ನೈತಿಕ ಪೊಲೀಸ್ ಗಿರಿಯ ಸದ್ದು ಕೇಳಿಸಿದೆ.




More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here