Friday 4th, July 2025
canara news

ಗೌರಿ ಹತ್ಯೆ ತಿಳಿದು ತುಂಬಾ ನೋವಾಗಿದೆ. ನಾಳೆ ನನ್ನ ಸಾವೂ ಕೂಡಾ ಈಗಾದರೂ ಆಶ್ಚರ್ಯ ಪಡಬೇಕಾಗಿಲ್ಲ. ಬಂಟ್ವಾಳ್

Published On : 07 Sep 2017   |  Reported By : Rons Bantwal


ಮಂಗಳೂರು: ಹಿರಿಯ ಪತ್ರಕರ್ತೆ ಪ್ರಗತಿಪರ ಚಿಂತಕಿ ಗೌರಿ ಲಂಕೇಶ್‌ರ ಬರ್ಬರ ಹತ್ಯೆಯನ್ನು ಖಂಡಿಸಿ ಇಂದು ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಪ್ರತಿಭಟನೆ ನಡೆಯಿತು.

ದ.ಕ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ನಡೆದ ಪ್ರತಿಭಟನೆಯಲ್ಲಿ ಗೌರಿ ಲಂಕೇಶ್‌ರ ಹತ್ಯೆ ಖಂಡಿಸಿ ಹಾಗೂ ಆರೋಪಿಗಳನ್ನು ತಕ್ಷಣವೇ ಬಂಧಿಸುವಂತೆ ಒತ್ತಾಯಿಸಲಾಯಿತು. ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮುಖಂಡರು ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದರು.

ಇದೇ ವೇಳೆ ಗೌರಿ ಲಂಕೇಶ್ ಹತ್ಯೆ ಆರೋಪಿಗಳನ್ನು ಶೀಘ್ರ ಬಂಧಿಸುವಂತೆ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ಪತ್ರಕರ್ತರಾದ ತಾರನಾಥ್ , ಜಗನ್ನಾಥ್ ಶೆಟ್ಡಿ ಬಾಳ, ಇರ್ಷಾದ್ ಉಪ್ಪಿನಂಗಡಿ, ಶ್ರೀನಿವಾಸ ಇಂದಾಜೆ, ಅಪುಲ್ ಇರಾ, ಸುಕೇಶ್ ಕುಮಾರ್ ಶೆಟ್ಟಿ. ಆರೀಫ್ ಕಲಕಟ್ಟಾಮೊದಲಾದವರು ಉಪಸ್ಥಿತರಿದ್ದರು.




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here