Thursday 18th, April 2024
canara news

ಗೌರಿ ಲಂಕೇಶ್ ಹತ್ಯೆ, ಸಿಬಿಐ ತನಿಖೆಗೆ ಜನಾರ್ದನ ಪೂಜಾರಿ ಆಗ್ರಹ

Published On : 08 Sep 2017   |  Reported By : Canaranews Network

ಮಂಗಳೂರು: 'ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ ಒಂದು ಪೂರ್ವ ನಿಯೋಜಿತ ಕೃತ್ಯವಾಗಿದ್ದು, ಪ್ರಕರಣದ ತನಿಖೆಯನ್ನು ಈ ಕೂಡಲೇ ಸಿಬಿಐಗೆ ವಹಿಸಬೇಕು' ಎಂದು ಕಾಂಗ್ರೆಸ್ ಹಿರಿಯ ಮುಖಂಡ ಬಿ.ಜನಾರ್ದನ ಪೂಜಾರಿ ಒತ್ತಾಯಿಸಿದರು. ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 'ಗೌರಿ ಲಂಕೇಶ್ ಹತ್ಯೆಯನ್ನು ಖಂಡಿಸುತ್ತೇನೆ.
ಈ ಕೃತ್ಯ ಒಂದು ದಿನದಲ್ಲಿ ಮಾಡಿದ್ದಲ್ಲ ಇದೊಂದು ಪೂರ್ವ ನಿಯೋಜಿತ ಹತ್ಯೆ' ಎಂದು ಅಭಿಪ್ರಾಯಪಟ್ಟರು. ಗೌರಿ ಲಂಕೇಶ್ ಅವರಿಗೆ ಬೆದರಿಕೆ ಇದೆ.

ಅವರಿಗೆ ಭದ್ರತೆ ನೀಡಬೇಕೆಂದು ಗೌರಿ ಲಂಕೇಶ್ ಸಹೋದರ ಇಂದ್ರಜಿತ್ ಲಂಕೇಶ್ ಹಾಗೂ ಅವರ ತಾಯಿ ಕೂಡ ಕೇಳಿದ್ದರು' ಎಂದು ಪೂಜಾರಿ ಹೇಳಿದರು.'ಸರ್ಕಾರ ಗೌರಿ ಲಂಕೇಶ್ ಅವರಿಗೆ ಭದ್ರತೆ ಒದಗಿಸುವ ಬಗ್ಗೆ ನಿರ್ಲಕ್ಷ್ಯ ತೋರಿದೆ. ಚಿಂತಕರಾದ ಪ್ರೊ.ಎಂ.ಎಂ ಕಲಬುರ್ಗಿ, ನರೇಂದ್ರ ದಾಬೋಲ್ಕರ್ ಅವರ ಬಳಿಕ ಗೌರಿ ಲಂಕೇಶ್ ಅವರದ್ದು ಮೂರನೇ ಹತ್ಯೆಯಾಗಿದೆ' ಎಂದು ಪೂಜಾರಿ ವಿಷಾದ ವ್ಯಕ್ತಪಡಿಸಿದರು.

More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here