Saturday 10th, May 2025
canara news

ದಿನಮಣಿ ಅವರಿಗೆ ಆದರ್ಶ ಶಿಕ್ಷಕ ಪ್ರಶಸ್ತಿ

Published On : 10 Sep 2017   |  Reported By : Bernard D'Costa


ಕೋಟ: ಕುಂದಾಪುರ ಸೈಂಟ್ ಮೇರಿಸ್ ಪ್ರೌಢಶಾಲೆಯ ಹಿರಿಯ ಶಿಕ್ಷಕ

ಸ್ಟ್ಯಾನ್ಲಿ ದಿನಮಣಿ ಅವರಿಗೆ ಉಡುಪಿ ಆದರ್ಶ ಆಸ್ಪತ್ರೆಯ ಪ್ರಾಯೋಜಕತ್ವದ ಸಾರ್ವಜನಿಕ ಶಿಕ್ಷಣ ಇಲಾಖೆ ಕೊಡಮಾಡುವ 2017-18ನೇ ಸಾಲಿನ ಉಡುಪಿ ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿ ಲಬಿಸಿದೆ.

ಇವರು 1983ರಲ್ಲಿ ಶಂಕರಪುರ ಸೈಂಟ್ ಜೋನ್ಸ್ ಪ್ರೌಢಶಾಲೆಯಲ್ಲಿ ಶಿಕ್ಷಕ ವೃತ್ತಿ ಆರಂಬಿಸಿ,19 ವರ್ಷಗಳ ಕಾಲ ಅಲ್ಲಿ ಸೇವೆ ಸಲ್ಲಿಸಿ, 2002ರಿಂದ ಕುಂದಾಪುರದ ಸೈಂಟ್ ಮೇರಿಸ್ ಪ್ರೌಢಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಅಂತರಾಷ್ಟ್ರೀಯ ಸಂಸ್ಥೆಯಾದ ರೋಟರಿಯ ಸದಸ್ಯರಾಗಿ, ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ ಇವರು ತದನಂತರ ಶಂಕರಪುರ ಜಾಸ್ಮಿನ್ ಜ್ಯೂನಿಯರ್ ಚೇಂಬರ್‍ನ (ಜೆಸಿಐ) ಸ್ಥಾಪಕಾಧ್ಯಕ್ಷರಾಗಿ ಸೇವೆ ಸಲ್ಲಿಸಿದರು.ಜೆಸಿಐನ ಆಡಳಿತ ವಿಭಾಗದ ವಲಯಾಧಿಕಾರಿಯಾಗಿ ಅನೇಕ ಕಾರ್ಯಕ್ರಮಗಳನ್ನು ಸಂಘಟಿಸಿದ ಇವರು, ರೋಟರಿಯ ಜಿಲ್ಲಾ ಮಟ್ಟದ ಇಂಟರ್ಯಾಕ್ಟ್ ಸಮ್ಮೇಳನ ನಡೆಸಿದವರು. ಜೆಸಿಐನ ರಾಷ್ಟ್ರೀಯ ಮಟ್ಟದ ತರಬೇತಿದಾರರಾಗಿ ಸೇವೆ ಸಲ್ಲಿಸಿದ್ದಾರೆ. ಮಕ್ಕಳಿಗೆ ಅಚ್ಚುಮೆಚ್ಚಿನ ಗಣಿತ ಶಿಕ್ಷಕರಾದ ಇವರು, ಶಿಕ್ಷಣ ಇಲಾಖೆಯ ಪ್ರತಿಭಾ ಕಾರಂಜಿ, ಕ್ರೀಡಾಕೂಟವನ್ನು ಯಶಸ್ವಿಯಾಗಿ ಸಂಘಟಿಸಿದ್ದಾರೆ.ಸೆ.10ರಂದು ಬೆಳಿಗ್ಗೆ 10ಕ್ಕೆ ಉಡುಪಿ ಆದರ್ಶ ಆಸ್ಪತ್ರೆಯಲ್ಲಿ ನಡೆಯುವ




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here