Saturday 10th, May 2025
canara news

ಮಂಗಳೂರಿನಲ್ಲಿ ಹೈಟೆಕ್ ವೇಶ್ಯಾವಾಟಿಕೆ ಜಾಲ ಬಯಲು

Published On : 10 Sep 2017   |  Reported By : Canaranews network


ಮಂಗಳೂರು: ಮಂಗಳೂರಿನಲ್ಲಿ ಹೈಟೆಕ್ ವೇಶ್ಯಾವಾಟಿಕೆ ಅಡ್ಡೆಯ ಮೇಲೆ ಪೊಲೀಸರು ದಾಳಿ ನಡೆಸಿ, ಇಬ್ಬರು ಮಹಿಳೆಯರು ಸೇರಿದಂತೆ ಮೂವರನ್ನು ಬಂಧಿಸಿದ್ದಾರೆ. ಮಂಗಳೂರಿನ ಕದ್ರಿ ಕೈ ಬಟ್ಟಲ್ ಎಂಬಲ್ಲಿ ಮನೆಯೊಂದರ ಮೇಲೆ ದಾಳಿ ನಡೆಸಿದ ಪೊಲೀಸರು ಮೂವರು ಯುವತಿಯರನ್ನು ರಕ್ಷಿಸಿದ್ದಾರೆ.ಹೈಟೆಕ್ ವೇಶ್ಯಾವಾಟಿಕೆ ಕುರಿತು ಖಚಿತ ಮಾಹಿತಿ ಪಡೆದ ಪೊಲೀಸರು, ಎಸಿಪಿ ಉದಯ ನಾಯ್ಕ್ ನೇತೃತ್ವದಲ್ಲಿ ದಾಳಿ ನಡೆಸಿದ್ದಾರೆ.

ರಕ್ಷಿಸಲಾದ ಯುವತಿಯರು ಬೆಂಗಳೂರಿನವರು ಎಂದು ಹೇಳಲಾಗಿದೆ.ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಮಹಿಳೆಯರು ಸೇರಿ ಸ್ಥಳೀಯ ನಿವಾಸಿ ರಮೇಶ್ ಎಂಬಾತನನ್ನು ಕೂಡ ಬಂಧಿಸಲಾಗಿದೆ. ಮೊಬೈಲ್ ಸೇರಿದಂತೆ ಸಾಮಾಜಿಕ ಜಾಲತಾಣದ ಮೂಲಕ ಗುಪ್ತವಾಗಿ ಈ ಹೈಟೆಕ್ ವೇಶ್ಯಾವಾಟಿಕೆ ನಡೆಸಲಾಗುತ್ತಿತ್ತು.ಈ ಬಗ್ಗೆ ಖಚಿತ ಮಾಹಿತಿ ಪಡೆದಿದ್ದ ಪೊಲೀಸರು ಮಾರುವೇಷದಲ್ಲಿ ತೆರಳಿ ದಾಳಿ ನಡೆಸಿದ್ದಾರೆ.

ಅತ್ಯಂತ ರಹಸ್ಯವಾಗಿ ಕಾರ್ಯಾಚರಿಸುತ್ತಿದ್ದ ಹೈಟೆಕ್ ವೇಶ್ಯಾವಾಟಿಕೆಯನ್ನು ಮಂಗಳೂರು ಪೊಲೀಸರು ಭೇದಿಸಿದ್ದಾರೆ. ದಾಳಿ ನಡೆದ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ತನಿಖೆ ಮುಂದುವರಿದಿದೆ. ಈ ಘಟನೆಗೆ ಸಂಬಂಧಿಸಿದಂತೆ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

 

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here