Saturday 10th, May 2025
canara news

ಉಡುಪಿ ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಆರೋಪಿಗಳ ಮೇಲೆ ಹಲ್ಲೆ

Published On : 14 Sep 2017


ಮಂಗಳೂರು: ಉಡುಪಿ ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳ ಮೇಲೆ ಮಂಗಳೂರು ಕಾರಾಗೃಹದಲ್ಲಿ ಹಲ್ಲೆ ನಡೆದ ಘಟನೆ ಬೆಳಕಿಗೆ ಬಂದಿದೆ .

ಮಂಗಳೂರಿನ ಜಿಲ್ಲಾ ಕಾರಾಗೃಹದಲ್ಲಿ ಈ ಘಟನೆ ನಡೆದಿದ್ದು, ಕಾರಾಗೃಹದ ಸಹ ಕೈದಿಗಳಾದ ಬಿಲಕೇರಿ ಧನರಾಜ್ ಮತ್ತು ತಂಡ ಭಾಸ್ಕರ್ ಶೆಟ್ಟಿ ಕೊಲೆ ಆರೋಪಿಗಳಾದ ಮಗ ನವನೀತ್ ಶೆಟ್ಟಿ ಹಾಗೂ ಜ್ಯೋತಿಷಿ ನಿರಂಜನ್ ಭಟ್ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದೆ.ಘಟನೆಯಲ್ಲಿ ನಿರಂಜನ್ ಭಟ್ ಹಾಗೂ ನವನೀತ್ ಶೆಟ್ಟಿ ಅವರಿಗೆ ಗಾಯಗಳಾಗಿದ್ದು, ಅವರನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಹಲ್ಲೆ ನಡೆದ ವಿಷಯ ತಿಳಿಸಿದಂತೆ ಮಂಗಳೂರು ಕಾರಾಗೃಹಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.

ನಿರಂಜನ್ ಭಟ್ ಹಾಗೂ ನವನೀತ್ ಶೆಟ್ಟಿಯ ಮೇಲೆ ನಡೆದ ಹಲ್ಲೆಗೆ ಕಾರಣ ತಿಳಿದು ಬಂದಿಲ್ಲ . 2016 ಜುಲೈಯಲ್ಲಿ ಉದ್ಯಮಿ ಭಾಸ್ಕರ್ ಶೆಟ್ಟಿ ಅವರ ಕೊಲೆ ನಡೆದಿತ್ತು. ಭಾಸ್ಕರ್ ಶೆಟ್ಟಿ ಅವರ ಪತ್ನಿ ರಾಜೇಶ್ವರಿ ಶೆಟ್ಟಿ, ಮಗ ನವನೀತ್ ಶೆಟ್ಟಿ ಮತ್ತು ಜ್ಯೋತಿಷಿ ನಿರಂಜನ ಭಟ್ ಈ ಪ್ರಕರಣದ ಪ್ರಮುಖ ಆರೊಪಿಗಳಾಗಿದ್ದಾರೆ. ಈ ಪ್ರಕರಣದ ವಿಚಾರಣೆ ನ್ಯಾಯಾಲಯ ನಡೆಯುತ್ತಿದ್ದು ಈ ಹಿನ್ನೆಲೆಯಲ್ಲಿ ಆರೋಪಿಗಳನ್ನು ಮಂಗಳೂರು ಕಾರಾಗೃಹದಲ್ಲಿ ಇರಿಸಲಾಗಿತ್ತು.

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here