Thursday 28th, March 2024
canara news

ಕಾವ್ಯಾ ಪೂಜಾರಿ ನಿಗೂಢ ಸಾವು ಪ್ರಕರಣ ಸಾಮೂಹಿಕ ಧರಣಿ

Published On : 14 Sep 2017   |  Reported By : Canaranews Network

ಮಂಗಳೂರು: ವಿದ್ಯಾರ್ಥಿನಿ ಕಾವ್ಯಾ ಪೂಜಾರಿ ನಿಗೂಢ ಸಾವು ಪ್ರಕರಣದ ಉನ್ನತ ಮಟ್ಟದ ತನಿಖೆ ನಡೆಸಬೇಕು ಹಾಗೂ ಶೈಕ್ಷಣಿಕ ಹತ್ಯೆಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳಬೇಕು. ನಿಯಮ ಉಲ್ಲಂಘಿಸುವ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಲಗಾಮು ವಿಧಿಸಬೇಕು ಎಂದು ಆಗ್ರಹಿಸಿ ಸಮಾನ ಮನಸ್ಕ ಸಂಘಟನೆಗಳ ವೇದಿಕೆ ವತಿಯಿಂದ ದ.ಕ. ಜಿಲ್ಲಾಧಿಕಾರಿ ಕಚೇರಿ ಮುಂದುಗಡೆ ಸೋಮವಾರ ಸಾಮೂಹಿಕ ಧರಣಿ ನಡೆಯಿತು.

ಮಹಿಳಾಪರ ರಾಜ್ಯ ಹೋರಾಟಗಾರರಾದ ಕೆ.ಎಸ್. ವಿಮಲಾ ಅವರು ಮಾತನಾಡಿ, ವಿದ್ಯಾರ್ಥಿನಿ ಕಾವ್ಯಾ ಪೂಜಾರಿ ನಿಗೂಢ ಸಾವು ನಡೆದು ಇಷ್ಟು ದಿನಗಳಾದರೂ ಕಾವ್ಯಾ ಕುಟುಂಬಕ್ಕೆ ಇನ್ನೂ ನ್ಯಾಯ ದೊರಕಿಲ್ಲ. ಘಟನೆಯ ತನಿಖೆ ನಡೆಸುವ ಕಾರಣದಿಂದ ಜಿಲ್ಲಾಡಳಿತ ರಚಿಸಿರುವ ಸಮಿತಿಯ ವರದಿಯನ್ನು ಒಂದು ತಿಂಗಳೊಳಗೆ ಸಾರ್ವಜನಿಕರೆದುರು ಬಹಿರಂಗಗೊಳಿಸಬೇಕು ಹಾಗೂ ಇಲ್ಲಿಯವರೆಗೆ ನಡೆದ ತನಿಖೆಯ ವರದಿಯನ್ನು ಸಾರ್ವಜನಿಕರ ಮುಂದೆ ತತ್ಕ್ಷಣವೇ ಸಂಬಂಧ ಪಟ್ಟವರು ಪ್ರಸ್ತುತಪಡಿಸಬೇಕು ಎಂದವರು ಆಗ್ರಹಿಸಿದರು

More News

ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
 ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ
ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ

Comment Here