Thursday 2nd, May 2024
canara news

ಮಂಗಳೂರು ದಸರಾ: ಪೂರ್ವಭಾವಿ ಸಭೆ

Published On : 19 Sep 2017   |  Reported By : canaranews network   |  Pic On: Photo credit : The Hindu


ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ದೇಗುಲದಲ್ಲಿ ಜರಗಲಿರುವ ಮಂಗಳೂರು ದಸರಾ ಮಹೋತ್ಸವವನ್ನು ಮತ್ತಷ್ಟು ವ್ಯವಸ್ಥಿತವಾಗಿ ನಡೆಸುವ ಉದ್ದೇಶದಿಂದ ವಿವಿಧ ಸಮಿತಿಗಳನ್ನು ರಚಿಸಲಾಯಿತು. ದೇಗುಲದ ಸಭಾಂಗಣದಲ್ಲಿ ದೇವಸ್ಥಾನದ ಅಧ್ಯಕ್ಷ ಎಚ್.ಎಸ್. ಸಾಯಿರಾಂ ಅಧ್ಯಕ್ಷತೆಯಲ್ಲಿ ಜರಗಿದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ವಕ್ತಾರ ಹರಿಕೃಷ್ಣ ಬಂಟ್ವಾಳ, ಮಂಗಳೂರು ದಸರಾ ಮಹೋತ್ಸವ ಕೇವಲ ಜಿಲ್ಲೆ, ರಾಜ್ಯಕ್ಕೆ ಸೀಮಿತವಾಗದೆ ದೇಶ-ವಿದೇಶದ ಪ್ರವಾಸಿಗರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದೆ.

ಈ ಬಾರಿಯೂ ನಿರೀಕ್ಷೆ ಮೀರಿ ಪ್ರವಾಸಿಗರು ಬರುವ ಸಾಧ್ಯತೆಯಿರುವುದರಿಂದ ವ್ಯವಸ್ಥೆ ದೃಷ್ಟಿಯಿಂದ ವಿವಿಧ ಸಮಿತಿಗಳನ್ನು ರಚಿಸಲಾಗುವುದು ಎಂದು ಹೇಳಿದರು.ಕೋಶಾಧಿಕಾರಿ ಪದ್ಮರಾಜ್ ಕೆ. ಮಾತನಾಡಿ, ದಸರಾ ಮಹೋತ್ಸವಕ್ಕೆ ಬರುವ ಪ್ರವಾಸಿಗರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸುವುದಲ್ಲದೆ, ಕಾರ್ಯಕ್ರಮ ಮತ್ತಷ್ಟು ಶಿಸ್ತುಬದ್ಧ, ಅಚ್ಚುಕಟ್ಟಾಗಿ ನಡೆಸುವ ದೃಷ್ಟಿಯಿಂದ ಸ್ವಾಗತ ಸಮಿತಿ, ವೈದಿಕ ಸಮಿತಿ, ಅನ್ನಸಂತರ್ಪಣ ಸಮಿತಿ, ಪ್ರಸಾದ ವಿತರಣ ಸಮಿತಿ, ಭದ್ರತಾ ಸಮಿತಿ, ಪಾರ್ಕಿಂಗ್ ಸಮಿತಿ, ಸುರಕ್ಷಾ ಸಮಿತಿ, ಸೇವಾ ಕೌಂಟರ್ ಸಮಿತಿ, ಪ್ರಚಾರ ಸಮಿತಿ, ಬೆಳಕು ನಿರ್ವಹಣ ಸಮಿತಿ, ಮೆರವಣಿಗೆ ಸಮಿತಿ ಸಹಿತ ವಿವಿಧ ಸಮಿತಿ ರಚಿಸಲಾಗಿದೆ ಎಂದರು.

 




More News

ಎ.30; ಪಟ್ಲ  ಸತೀಶ್  ಶೆಟ್ಟಿ ಮಂಗಳೂರು ಪ್ರೆಸ್  ಕ್ಲಬ್ ಗೌರವ ಅತಿಥಿ
ಎ.30; ಪಟ್ಲ ಸತೀಶ್ ಶೆಟ್ಟಿ ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ

Comment Here