Saturday 10th, May 2025
canara news

ಸೆ.21: ಪೇಜಾವರ ಮಠ ಮುಂಬಯಿ ಶಾಖೆಯ ನವೀಕೃತ ಹವಾನಿಯಂತ್ರಿತ ಸಭಾಗೃಹ ಉದ್ಘಾಟನೆ

Published On : 20 Sep 2017   |  Reported By : Rons Bantwal


ಮುಂಬಯಿ, ಸೆ.20: ಮಹಾನಗರದ ಸಾಂತಾಕ್ರೂಜ್ ಪೂರ್ವದ ಪ್ರಭಾತ್ ಕಾಲೋನಿ ಇಲ್ಲಿ ಕಳೆದ ಅನೇಕ ದಶಕಗಳಿಂದ ಸೇವಾ ನಿರತ ಉಡುಪಿ ಪೇಜಾವರ ಮಠ ಮುಂಬಯಿ ಶಾಖೆಯ ನವೀಕೃತ ಹವಾನಿಯಂತ್ರಿತ ಸಭಾಗೃಹವನ್ನು ಇದೇ ನಾಳೆ (ಸೆ.21) ಗುರುವಾರ ಸಂಜೆ 4.00 ಗಂಟೆಗೆ ಉದ್ಘಾಟನೆ ಗೊಳಿಸಲಾಗುವುದು ಎಂದು ಮಠದ ಶಾಖೆಯ ಪ್ರಬಂಧಕ ರಾಮದಾಸ ಉಪಾಧ್ಯಾಯ ರೆಂಜಾಳ ತಿಳಿಸಿದ್ದಾರೆ.

ಜಗದ್ಗುರು ಶ್ರೀ ಮಧ್ವಾಚಾರ್ಯ ಮಹಾ ಸಂಸ್ಥಾನದ ಉಡುಪಿ ಶ್ರೀ ಪೇಜಾವರ ಅಧೋಕ್ಷಜ ಮಠಧೀಶ ಪರಮಪೂಜ್ಯ ಶ್ರೀ ಶ್ರೀ ವಿಶ್ವೇಶತೀರ್ಥ ಶ್ರೀಪಾದಂಗಳವರ ಮತ್ತು ಕಿರಿಯ ಯತಿ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದಂಗಳವರ ಆಶೀರ್ವದಗಳೊಂದಿಗೆ ನಡೆಯಲಿರುವ ಸರಳ ಉದ್ಘಾಟನಾ ಸಮಾರಂಭದಲ್ಲಿ ಉಡುಪಿ ಶ್ರೀ ಪಲಿಮಾರು ಮಠಾಧೀಶ ಶ್ರೀ ವಿದ್ಯಾಧೀಶ ತೀರ್ಥ ಸ್ವಾಮೀಜಿ ಅವರು ಚರಣಸ್ಪರ್ಶ ಗೊಳಿಸಿ ಹವಾನಿಯಂತ್ರಿತ ಸಭಾಗೃಹವನ್ನು ಉದ್ಘಾಟಿಸುವರು.

ಆ ಪ್ರಯುಕ್ತ ಮುಂದಿನ ಪರ್ಯಾಯವನ್ನು ಅಲಂಕರಿಸಲಿರುವ ಪಲಿಮಾರುಶ್ರೀಗಳಿಗೆ ಅಂದು ಸಂಜೆ 4.00 ಗಂಟೆಗೆ ಸಾಂಪ್ರದಾಯಿಕ ಭವ್ಯ ಮೆರವಣಿಗೆಯಲ್ಲಿ ಬರಮಾಡಿಕೊಳ್ಳಲಾಗುವುದು. ಸಂಜೆ 5.00 ಗಂಟೆಗೆ ಸಭಾಗೃಹದ ಉದ್ಘಾಟನೆ ನಡೆಸಾಅಗುವುದು ಎಂದು

ಈ ಕಾರ್ಯಕ್ರಮಗಳಲ್ಲಿ ನಾಡಿನ ಸಮಸ್ತ ಭಕ್ತಾಭಿಮಾನಿಗಳು ಸಹಭಾಗಿಗಳಾಗಿ ಶ್ರೀಕೃಷ್ಣ ದೇವರ ಕೃಪೆಗೆ ಪಾತ್ರರಾಗುವಂತೆ ಪೂರ್ಣಪ್ರಜ್ಞಾ ವಿದ್ಯಾಪೀಠ ಪ್ರತಿಷ್ಠಾನದ ವಿಶ್ವಸ್ಥ ಮಂಡಳಿ ಹಾಗೂ ಪೇಜಾವರ ಮಠ ಮುಂಬಯಿ ಶಾಖೆಯ ಪ್ರಬಂಧಕರುಗಳಾದ ಪ್ರಕಾಶ ಆಚಾರ್ಯ ರಾಮಕುಂಜ, ಹರಿ ಭಟ್ ಮತ್ತು ನಿರಂಜನ್ ಗೋಗ್ಟೆ ಈ ಮೂಲಕ ತಿಳಿಸಿದ್ದಾರೆ.




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here