ಮಂಗಳೂರು: ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿ ಕಾವ್ಯಾ ಸಾವು ಪ್ರಕರಣದ ಬಗ್ಗೆ ಎಸಿಪಿ ತನಿಖೆ ಮತ್ತು ಇತರ ತನಿಖಾ ವರದಿಗಳು ಬಂದಿವೆ. ಪ್ರಕರಣವನ್ನು ಸಿಐಡಿಗೆ ಹಸ್ತಾಂತರಿಸಬೇಕೆಂಬ ಒತ್ತಾಯಗಳು ಕೇಳಿಬರುತ್ತಿವೆ.
ಈ ವಿಚಾರದಲ್ಲಿ ಮಂಗಳೂರಿನ ಪೊಲೀಸ್ ಆಯುಕ್ತ ಟಿ.ಆರ್. ಸುರೇಶ್ ಅತೀ ಶೀಘ್ರದಲ್ಲಿ ಸೂಕ್ತ ನಿರ್ಧಾರವನ್ನು ಕೈಗೊಳ್ಳಲಿದ್ದಾರೆ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿಯವರು ಮಂಗಳೂರಿನಲ್ಲಿ ತಿಳಿಸಿದ್ದಾರೆ.