Saturday 10th, May 2025
canara news

ಅಕ್ಟೊಬರ್ 6ರಂದು ಗಲ್ಫ್'ನಲ್ಲಿ ಬಿಡುಗಡೆಯಾಗಲಿರುವ 'ಮಾರ್ಚ್ 22' ಸಿನೆಮಾ ಟಿಕೆಟ್ ಬಿಡುಗಡೆ

Published On : 23 Sep 2017   |  Reported By : Iqbal Uchila


ದುಬೈ: ಕರ್ನಾಟಕದಾದ್ಯಂತ ಸಿನಿ ಪ್ರಿಯರ ಮನ ಗೆದ್ದಿರುವ ಹಾಗು ಮಾಧ್ಯಮಗಳ ಮೆಚ್ಚುಗೆ ಗಳಿಸಿರುವ 'ಮಾರ್ಚ್ 22' ಸಿನೆಮಾ ದುಬೈ, ಶಾರ್ಜಾ, ಅಬುಧಾಬಿ ಸೇರಿದಂತೆ ಯುಎಇ(ಗಲ್ಫ್) ಯಾದ್ಯಂತ ಅಕ್ಟೊಬರ್ 6 ರಂದು ಬಿಡುಗಡೆಯಾಗಲಿದ್ದು, ಈ ಹಿನ್ನೆಲೆಯಲ್ಲಿ ಶುಕ್ರವಾರ ದುಬೈಯ ಅಲ್ ಕಿಸೆಸ್ನ ಫೋರ್ಚುನ್ ಪ್ಲಾಝ ಹೋಟೆಲಿನಲ್ಲಿ ಸಿನೆಮಾದ ಪ್ರಥಮ ಪ್ರದರ್ಶನದ ಟಿಕೆಟ್ ಬಿಡುಗಡೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ACME ಮೂವೀಸ್ ಇಂಟರ್ ನ್ಯಾಷನಲ್ ಸಂಸ್ಥೆಯ ಬ್ಯಾನರಿನಡಿಯಲ್ಲಿ ದುಬೈಯ ಹೆಸರಾಂತ ಉದ್ಯಮಿ ಹರೀಶ್ ಶೇರಿಗಾರ್ ಹಾಗು ಅವರ ಧರ್ಮ ಪತ್ನಿ ಶರ್ಮಿಳಾ ಶೇರಿಗಾರ್ ನಿರ್ಮಿಸಿರುವ ಈ ಸಿನೆಮಾವನ್ನು ಹಿರಿಯ ನಿರ್ದೇಶಕ ಕೂಡ್ಲು ರಾಮಕೃಷ್ಣ ನಿರ್ದೇಶಿಸಿದ್ದಾರೆ.

ಕಾರ್ಯಕ್ರಮವನ್ನು ಅತಿಥಿಗಳು ದೀಪ ಬೆಳೆಗಿಸಿ ಉದ್ಘಾಟಿಸಿದರು. ಹರೀಶ್ ಶೇರಿಗಾರ್ ಹಾಗು ಅವರ ಧರ್ಮ ಪತ್ನಿ ಶರ್ಮಿಳಾ ಶೇರಿಗಾರ್ ಸಮ್ಮುಖದಲ್ಲಿ ನಡೆದ ಕಾರ್ಯಕ್ರಮದಲ್ಲಿ ಉದ್ಯಮಿಗಳಾದ ಜೋಸೆಫ್ ಮಾತಾಯಿಸ್, ಫ್ರಾಂಕ್ ಫೆರ್ನಾಂಡಿಸ್, ಸರ್ವೋತ್ತಮ ಶೆಟ್ಟಿ, ನಾರಾಯಣ ದೇವಾಡಿಗ, ಸತೀಶ್ ಪೂಜಾರಿ, ದಿನೇಶ್ ಶೇರಿಗಾರ್ , ದೀಪಕ್ ಸೋಮಶೇಖರ್ ಟಿಕೆಟ್ ಬಿಡುಗಡೆ ಮಾಡಿದರು. ಇದೆ ವೇಳೆ ಸಿನೆಮಾದ ಹಾಡಿನ ಸಿಡಿಯನ್ನು ಕೂಡ ಬಿಡುಗಡೆ ಮಾಡಲಾಯಿತು.

ಸಿನೆಮಾದ ಮೊದಲ ಟಿಕೇಟನ್ನು ಅತಿಥಿಗಳು ಪಡೆದುಕೊಂಡರು. ಸಿನೆಮಾದ ಬಗ್ಗೆ ಎಂ.ಈ.ಮೂಳೂರು, ಗುಣಶೀಲ ಶೆಟ್ಟಿ, ಶಕೀಲ್ ಹಸನ್ ತಮ್ಮ ಅನಿಸಿಕೆ, ಅಭಿಪ್ರಾಯವನ್ನು ವ್ಯಕ್ತಪಡಿಸಿದರು.

ಕರ್ನಾಟಕದಲ್ಲಿ ಭಾರಿ ಸುದ್ದಿ ಮಾಡಿರುವ 'ಮಾರ್ಚ್ 22' ಸಿನೆಮಾದಲ್ಲಿ ಖ್ಯಾತ ನಟ -ನಟಿಯರು ಅಭಿನಯಿಸಿದ್ದಾರೆ. ಅನಂತ್‍ನಾಗ್, ಗೀತಾ ಜೊತೆ ಹಿರಿಯ ಕಲಾವಿದರಾದ ಶರತ್ ಲೋಹಿತಾಶ್ವ, ಅಶೀಷ್ ವಿದ್ಯಾರ್ಥಿ, ಸಾಧು ಕೋಕಿಲಾ, ಜೈಜಗದೀಶ್, ರವಿ ಕಾಲೇ, ವಿನಯಾ ಪ್ರಸಾದ್, ಪದ್ಮಜಾ ರಾವ್, ರಮೇಶ್ ಭಟ್, ಶ್ರೀನಿವಾಸ್ ಮೂರ್ತಿ, ರವೀಂದ್ರನಾಥ್ ಸೇರಿದಂತೆ ಹಲವು ಹಿರಿಯ ನಟ-ನಟಿಯರೊಂದಿಗೆ ಆರ್ಯವರ್ಧನ್ ಮತ್ತು ಕಿರಣ್ ರಾಜ್ ನಾಯಕರಾಗಿ ಕಾಣಿಸಿಕೊಂಡಿದ್ದು, ಮೇಘಶ್ರೀ ಮತ್ತು ದೀಪ್ತಿ ಶೆಟ್ಟಿ ನಾಯಕಿಯರಾಗಿ ತಮ್ಮ ನಟನೆಯನ್ನು ಮುಂದಿಟ್ಟಿದ್ದಾರೆ. ಜೊತೆಗೆ ಕಿಶೋರ್, ಸೃಜನ್ ರೈ, ಶಾಂತಾ ಆಚಾರ್ಯ, ದುಬೈಯ ರಂಗಭೂಮಿ ಕಲಾವಿದರಾದ ಚಿದಾನಂದ ಪೂಜಾರಿ, ಸುವರ್ಣ ಸತೀಶ್, ಪ್ರಶೋಭಿತ ಮುಂತಾದವರು ನಟಿಸಿದ್ದಾರೆ.

ಕರಾವಳಿ ಭಾಗದ ದುಬೈಯ ಹೆಸರಾಂತ ಉದ್ಯಮಿ ಪದ್ಮಶ್ರೀ ಡಾ. ಬಿ.ಆರ್ ಶೆಟ್ಟಿ ಚಿತ್ರದ ಹಾಡೊಂದರಲ್ಲಿ ಕಾಣಿಸಿಕೊಳ್ಳುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.

ಅಕ್ಟೊಬರ್ 6 ರಂದು ಬಿಡುಗಡೆಗೊಳ್ಳಲಿರುವ ಸಿನೆಮಾದ ಮೊದಲ ಪ್ರದರ್ಶನದಲ್ಲಿ ಕನ್ನಡ ಚಿತ್ರರಂಗದ ಹಿರಿಯ ನಟ ಹಾಗು 'ಮಾರ್ಚ್ 22' ಸಿನೆಮಾದಲ್ಲಿ ಅಭಿನಯಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿರುವ ನಟ ಅನಂತ್ ನಾಗ್, ಅವರ ಧರ್ಮ ಪತ್ನಿ, ಹಿರಿಯ ನಟಿ ಗಾಯತ್ರಿ ಅನಂತ್ ನಾಗ್, ಯು-ಟರ್ನ್, ರಂಗತರಂಗಿ ಖ್ಯಾತಿಯ ನಟಿ ರಾಧಿಕಾ ಚೇತನ್ ಸೇರಿದಂತೆ ಖ್ಯಾತ ನಟ-ನಟಿಯರು ಭಾಗವಹಿಸಲಿದ್ದಾರೆ.




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here