ಮಂಗಳೂರು : ತುಳುನಾಡಿನ ಜನಪದ ಕ್ರೀಡೆಯಾದ ಕಂಬಳ ನಡೆಯುವ ವೇಳಾಪಟ್ಟಿ ಬಿಡುಗಡೆಗೊಳಿಸಲಾಗಿದೆ.
ಮಂಗಳೂರು, ಉಡುಪಿ ಜಿಲ್ಲೆಗಳಲ್ಲಿ ನವೆಂಬರ್ 11, 2017ರಿಂದ 2018 ಮಾರ್ಚ್ 18ರ ವರಗೆ ಜಿಲ್ಲೆಯ ವಿವಿಧ ಕಡೆಗಳಲ್ಲಿ ಕಂಬಳ ನಡೆಯಲಿದೆ.ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ ಶಾಂತಾರಾಮ ಶೆಟ್ಟಿ ಬಾರ್ಕೂರು ಅವರ ಅಧ್ಯಕ್ಷತೆಯಲ್ಲಿ 2017-18 ನೇ ಸಾಲಿನ ಕಂಬಳ ನಡೆಸುವ ಬಗ್ಗೆ ಮೂಡಬಿದ್ರೆಯಲ್ಲಿ ನಡೆದ ಸಭೆಯಲ್ಲಿ ಹಲವು ತೀರ್ಮಾನ ಕೈಗೊಳ್ಳಲಾಗಿದೆ.