Saturday 10th, May 2025
canara news

ಮಂಗಳೂರಿನಲ್ಲಿ ದಸರಾ ವೈಭವ

Published On : 26 Sep 2017   |  Reported By : canaranews network


ಮಂಗಳೂರು: ದಸರಾ ಸಂಭ್ರಮದ ಹಿನ್ನೆಲೆಯಲ್ಲಿ ಕುದ್ರೋಳಿ ಕ್ಷೇತ್ರ ಸೇರಿದಂತೆ ಮಂಗಳೂರು ನಗರವೇ ವಿದ್ಯುದ್ದೀಪಗಳಿಂದ ಸಿಂಗಾರಗೊಂಡು ಝಗಮಗಿಸುತ್ತಿದೆ. ನಗರದ ಪ್ರಮುಖ ವೃತ್ತಗಳನ್ನು ವಿಶೇಷ ವಿದ್ಯುತ್‌ ದೀಪಗಳಿಂದ ಅಲಂಕರಿಸಲಾಗಿದೆ. ಕ್ಷೇತ್ರದಲ್ಲಿ ದಿನಂಪ್ರತಿ ಅನ್ನ ಸಂತರ್ಪಣೆ ನಡೆಯುತ್ತಿದೆ. ಗುರುವಾರದಿಂದ ಅ.1ರ ವರೆಗೆ ಶ್ರೀ ಕ್ಷೇತ್ರದ ಸಂತೋಷಿ ಕಲಾಮಂಟಪದಲ್ಲಿ ರಾಜ್ಯದ ಪ್ರಸಿದ್ಧ ಕಲಾವಿದರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿವೆ.

ಸೆ. 30ಕ್ಕೆ ವೈಭವದ ಮಂಗಳೂರು ದಸರಾ ಮೆರವಣಿಗೆ
ಶ್ರೀ ಕ್ಷೇತ್ರದ ನವೀಕರಣದ ರೂವಾರಿ, ಕೇಂದ್ರ ಸರಕಾರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಅವರ ಮಾರ್ಗದರ್ಶನ ಹಾಗೂ ನೇತೃತ್ವದಲ್ಲಿ ಮಂಗಳೂರು ದಸರಾ 10 ದಿನಗಳ ಕಾಲ ನಡೆಯಲಿದೆ. ಸೆ. 30ರಂದು ಶ್ರೀ ಶಾರದಾ ಮಾತೆಯ ಶೋಭಾಯಾತ್ರೆ ಹಾಗೂ ವಿಸರ್ಜನಾ ಮೆರವಣಿಗೆ ವಿಜೃಂಭಣೆಯಿಂದ ನಡೆಯಲಿದೆ. ಮೆರವಣಿಗೆಯಲ್ಲಿ ರಾಜ್ಯದ ವಿವಿಧ ಕಡೆಗಳಿಂದ ಆಗಮಿಸುವ ಟ್ಯಾಬ್ಲೊಗಳು, ಸಾಂಸ್ಕೃತಿಕ ಕಲಾ ತಂಡಗಳು ಪಾಲ್ಗೊಳ್ಳಲಿವೆ. ಮೆರವಣಿಗೆ ಸಾಗುವ ನಗರದ 9 ಕಿ.ಮೀ. ರಸ್ತೆ ವಿದ್ಯುದ್ದೀಪಗಳಿಂದ ಅಲಂಕೃತಗೊಂಡಿದೆ.




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here