Thursday 2nd, May 2024
canara news

ಮಂಗಳೂರಿನಲ್ಲಿ ವೈಭವದ ನವರಾತ್ರಿ ಮಹೋತ್ಸವ

Published On : 26 Sep 2017   |  Reported By : canaranews network   |  Pic On: Photo credit : The Hindu


ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಜರಗುವ ಮಂಗಳೂರು ದಸರಾಕ್ಕೆ ಮುನ್ನುಡಿಯಾಗಿ ಶ್ರೀ ಕ್ಷೇತ್ರದಲ್ಲಿ ಶಾರದೆ ಹಾಗೂ ನವದುರ್ಗೆಯರ ಪ್ರತಿಷ್ಠೆ ಗುರುವಾರ ನೆರವೇರಿತು.ಮಧ್ಯಾಹ್ನ 12.20ಕ್ಕೆ ದೇವಸ್ಥಾನದ ಗೋಕರ್ಣನಾಥ ಕಲ್ಯಾಣ ಮಂಟಪದಲ್ಲಿ ಕಲಾತ್ಮಕ ದರ್ಬಾರು ಮಂಟಪದಲ್ಲಿ ಶ್ರೀ ಶಾರದಾ ಮಾತೆ ಹಾಗೂ ನವದುರ್ಗೆಯರ ಮೂರ್ತಿಗಳನ್ನು ಏಕಕಾಲಕ್ಕೆ ಪ್ರತಿಷ್ಠಾಪಿಸಲಾಯಿತು.ನವರಾತ್ರಿ ಮಹೋತ್ಸವಕ್ಕೆ ಮಂಗಳೂರು ನಗರ ಪೊಲೀಸ್ ಆಯುಕ್ತ ಟಿ.ಆರ್. ಸುರೇಶ್ ಚಾಲನೆ ನೀಡಿದರು. ನವರಾತ್ರಿ ಸರ್ವರಿಗೂ ಸನ್ಮಂಗಲ ಕರುಣಿಸಲಿ. ಸಾಮರಸ್ಯ ಮೂಡುವಂತಾಗಲಿ. ನಾಡಿನ ಜನರ ನಿರೀಕ್ಷೆಗಳು ಈಡೇರಲಿ ಎಂದು ಹಾರೈಸಿದ ಸುರೇಶ್ ಅವರು, ದಸರಾ ಹಿನ್ನೆಲೆಯಲ್ಲಿ ಅತ್ಯಂತ ಸುಂದರವಾಗಿ ಕಂಗೊಳಿಸುತ್ತಿರುವ ಕುದ್ರೋಳಿ ಕ್ಷೇತ್ರವನ್ನು ನೋಡುವುದೇ ಆನಂದ ಎಂದರು.

ನವದುರ್ಗೆಯರು:
ಶ್ರೀ ಶಾರದಾ ಮಾತೆಯೊಂದಿಗೆ ನವದುರ್ಗೆಯರ ಆರಾಧನೆ ಇಲ್ಲಿನ ವೈಶಿಷ್ಟ್ಯ. ಶ್ರೀ ಶಾರದಾ ಮಾತೆ, ಆದಿಶಕ್ತಿಯೊಂದಿಗೆ ಸ್ಕಂದ ಮಾತೆ, ಕಾತ್ಯಾಯಿನಿ, ಮಹಾಕಾಳಿ, ಮಹಾಗೌರಿ, ಸಿದ್ಧಿ ಧಾತ್ರಿ, ಶೈಲಪುತ್ರಿ, ಬ್ರಹ್ಮಚಾರಿಣಿ, ಚಂದ್ರಘಂಟ, ಕೂಷ್ಮಾಂಡಿನಿ ದೇವಿಯರನ್ನು ವಿಗ್ರಹರೂಪದಲ್ಲಿ ಆರಾಧಿಸಲಾಗುತ್ತದೆ. ಜತೆಗೆ ಮಹಾಗಣಪತಿಯನ್ನು ಪ್ರತಿಷ್ಠಾಪಿಸಲಾಗಿದೆ.

 




More News

ಎ.30; ಪಟ್ಲ  ಸತೀಶ್  ಶೆಟ್ಟಿ ಮಂಗಳೂರು ಪ್ರೆಸ್  ಕ್ಲಬ್ ಗೌರವ ಅತಿಥಿ
ಎ.30; ಪಟ್ಲ ಸತೀಶ್ ಶೆಟ್ಟಿ ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ

Comment Here