Saturday 10th, May 2025
canara news

ಜರ್ಮನಿ ಮೂಲದ ಯುವತಿಯರ ಮೇಲೆ ಅತ್ಯಾಚಾರಕ್ಕೆ ಯತ್ನ

Published On : 25 Sep 2017   |  Reported By : canaranews network


ಮಂಗಳೂರು: ಜರ್ಮನಿ ಮೂಲದ ಯುವತಿಯರಿಬ್ಬರಿಗೆ ಲೈಂಗಿಕ ಕಿರುಕುಳ ನೀಡಿ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಮಂಗಳೂರು ಹೊರವಲಯದ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಪಾನೀರು ಬಳಿ ನಡೆದಿದೆ.ಅತ್ಯಾಚಾರಕ್ಕೆ ಯತ್ನಿಸಿದ ಯುವಕನನ್ನು ಸಾರ್ವಜನಿಕರು ಹಿಡಿದು ಪೊಲೀಸ್ ವಶಕ್ಕೆ ಒಪ್ಪಿಸಿದ್ದಾರೆ. ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿ ಹರೇಕಳ ನಿವಾಸಿ ಮುಸ್ತಾಫ ಎಂದು ಗುರುತಿಸಲಾಗಿದೆ. ಪಾನೀರು ಬಳಿಯ ಚರ್ಚ್ಗೆ ಸೇರಿದ ಆಶ್ರಮದಲ್ಲಿ ಸಾಮಾಜಿಕ ಕಾರ್ಯಕರ್ತೆಯರಾಗಿ ಬಂದಿದ್ದ ಜರ್ಮನಿ ಮೂಲದವರು ಸಂತ್ರಸ್ತ ಯುವತಿಯರಾಗಿದ್ದಾರೆ.

ಘಟನೆ ವಿವರ:
ದೇರಳಕಟ್ಟೆ ಸಮೀಪದ ಪಾನೀರು ಆಶ್ರಮದಲ್ಲಿ ಕಳೆದ ಹಲವು ತಿಂಗಳಿನಿಂದ ಜರ್ಮನಿ ಮೂಲದ ಯುವತಿಯರು ಸಾಮಾಜಿಕ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಶನಿವಾರ ಸಂಜೆ ಈ ಯುವತಿಯರು ದೇರಳಕಟ್ಟೆಯಿಂದ ಪಾನೀರು ಕಡೆ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ನಿರ್ಜನ ಪ್ರದೇಶದಲ್ಲಿ ದೇರಳಕಟ್ಟೆ ಕಡೆಯಿಂದ ಹಿಂಬಾಲಿಸಿಕೊಂಡು ಬಂದಿದ್ದ ಯುವಕ ಯುವತಿಯರನ್ನು ಅಡ್ಡಗಟ್ಟಿ ಮೈ ಮೇಲೆ ಕೈ ಹಾಕಿ, ಅತ್ಯಾಚಾರಕ್ಕೆ ಯತ್ನಿಸಿದ್ದ. ಯುವತಿ ಬೊಬ್ಬಿಟ್ಟಾಗ ಸ್ಥಳೀಯರು ಸ್ಥಳಕ್ಕೆ ಧಾವಿಸಿ ಯುವಕನನ್ನು ಹಿಡಿದು ಉಳ್ಳಾಲ ಪೊಲೀಸರಿಗೆ ಒಪ್ಪಿಸಿದ್ದಾರೆ. ಯುವಕ ಮಾನಸಿಕ ಅಸ್ವಸ್ಥನಾಗಿದ್ದು, ಈ ಕುರಿತ ವೆನ್ಲಾಕ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಕುರಿತ ಪತ್ರವನ್ನು ಯುವಕನ ಹೆತ್ತವರು ಪೊಲೀಸರಿಗೆ ಒಪ್ಪಿಸಿದ್ದಾರೆ. ಉಳ್ಳಾಲ ಪೊಲೀಸರು ಸ್ಥಳಕ್ಕೆ ಆಗಮಿಸಿ, ತನಿಖೆ ನಡೆಸುತ್ತಿದ್ದಾರೆ.




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here