Tuesday 7th, May 2024
canara news

ಶಾಲಾ ರಜೆ ಗೊಂದಲ ನಿವಾರಣೆಗೆ ಕ್ರಮ: ತನ್ವೀರ್ ಸೇಠ್

Published On : 26 Sep 2017   |  Reported By : canaranews network


ಮಂಗಳೂರು : ಶಾಲೆಗಳಿಗೆ ವಿವಿಧ ರಜೆ ಘೋಷಣೆ ಕುರಿತಂತೆ ಗೊಂದಲ ನಿವಾರಿಸುವ ನಿಟ್ಟಿನಲ್ಲಿ ಮುಂದಿನ ಶೈಕ್ಷಣಿಕ ವರ್ಷದಲ್ಲಿ ಏಕರೂಪದ ರಜಾ ಪದ್ಧತಿ ಜಾರಿಗೆ ತರಲಾಗುವುದು ಎಂದು ರಾಜ್ಯ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಮತ್ತು ವಕ್ಫ್ ಖಾತೆ ಸಚಿವ ತನ್ವಿರ್ ಸೇಠ್ ಹೇಳಿದ್ದಾರೆ.

ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಸ್ತುತ ವರ್ಷ ದಸರಾ ರಜೆಯಲ್ಲಿ ವ್ಯತ್ಯಾಸಗಳಾಗಿವೆ. ಮೈಸೂರು, ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ರಜೆಯಲ್ಲಿ ಮಾರ್ಪಾಟು ಮಾಡಲಾಗಿದೆ. ಇದನ್ನು ನಿವಾರಿಸಿ ಏಕರೂಪದ ರಜೆ ನಿಗದಿಪಡಿಸುವ ನಿಟ್ಟಿನಲ್ಲಿ ಶೈಕ್ಷಣಿಕ ವರ್ಷದ ಆರಂಭದಲ್ಲೇ ಕ್ರಮ ಕೈಗೊಳ್ಳಲಾಗುವುದು. ಹಬ್ಬಗಳಿಗೆ ಹೊಂದಿಕೆಯಾಗುವಂತೆ ರಜೆಗಳನ್ನು ಶೈಕ್ಷಣಿಕ ವರ್ಷದ ಆರಂಭದಲ್ಲೇ ಪ್ರಕಟಿಸಲಾಗುವುದು ಎಂದರು.

 




More News

ಧರ್ಮಸ್ಥಳದಲ್ಲಿ 52ನೆ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ: 123 ಜೊತೆ ವಧು-ವರರು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ
ಧರ್ಮಸ್ಥಳದಲ್ಲಿ 52ನೆ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ: 123 ಜೊತೆ ವಧು-ವರರು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ
"ದ ಡಾಪರ್ ಷೋ"
ಕೊಂಡೆವೂರು ಮಠಕ್ಕೆ ಶೃಂಗೇರಿ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿ ಭೇಟಿ
ಕೊಂಡೆವೂರು ಮಠಕ್ಕೆ ಶೃಂಗೇರಿ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿ ಭೇಟಿ

Comment Here