Saturday 10th, May 2025
canara news

ಬಂಟ್ವಾಳದಲ್ಲಿ ಗ್ಯಾಂಗ್ ವಾರ್: ಇಬ್ಬರ ಸಾವು

Published On : 26 Sep 2017   |  Reported By : canaranews network


ಮಂಗಳೂರು: ದ.ಕ.ಜಿಲ್ಲೆಯ ಬಂಟ್ವಾಳದ ಪರಂಗಿಪೇಟೆ ಎಂಬಲ್ಲಿ ರೌಡಿ ಶೀಟರ್ ಗಳಿದ್ದ ಕಾರಿನ ಮೇಲೆ ವಿರೋಧಿ ಪಾಳಯದವರು ನಡೆಸಿದ ಏಕಾಏಕಿ ದಾಳಿಯಲ್ಲಿ ಕಾರಿನಲ್ಲಿದ್ದ ಇಬ್ಬರು ಮೃತಪಟ್ಟು ಇತರ ಮೂವರು ಗಂಭೀರ ಗಾಯಗೊಂಡ ಘಟನೆ ಫರಂಗಿಪೇಟೆಯ ಗಾರ್ಡನ್ ಹೋಟೆಲ್ ಬಳಿ ಸೆ. 25ರ ತಡರಾತ್ರಿ ನಡೆದಿದೆ.

ಮೃತರನ್ನು ಮಂಗಳೂರು ಹೊರವಲಯದ ಅಡ್ಯಾರ್ ನಿವಾಸಿ ಝಿಯಾ ಹಾಗೂ ಫಯಾಝ್ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಅನಿಸ್, ಮುಶ್ತಾಕ್ , ಫಝಲ್ ಎಂಬವರು ಗಂಭಿರವಾಗಿ ಗಾಯಗೊಂಡಿದ್ದು ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಕಳೆದ ರಾತ್ರಿ ಝಿಯಾ ಹಾಗು ಫಯಾಝ್ ಸೇರಿದಂತೆ 5 ಜನರ ತಂಡ ಸ್ವಿಫ್ಟ್ ಕಾರಿನಲ್ಲಿ ಪರಂಗಿಪೇಟೆಯ ಗಾರ್ಡನ್ ಹೋಟೆಲ್ ನತ್ತ ಬಂದಿದೆ . ಈ ಕಾರನ್ನು ಹಿಂಬಾಲಿಸಿಕೊಂಡು ಬಂದ ಇನ್ನೋವಾ ಕಾರಿನಲ್ಲಿದ್ದ ದುಷ್ಕರ್ಮಿಗಳ ತಂಡ ಸ್ವಿಫ್ಟ್ ಕಾರಿನಲ್ಲಿದ್ದವರ ಮೇಲೆ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ ನಡೆಸಿದೆ.ಇದರಿಂದ ಜಿಲ್ಲೆಯಲ್ಲಿ ಮತ್ತೊಮ್ಮೆ ಗೊಂದಲದ ವಾತಾವರಣ ಸೃಷ್ಠಿಯಾಗಿದೆ.




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here