Friday 3rd, May 2024
canara news

ಆತ್ಮಹತ್ಯೆ ಯೋಚನೆ ತಡೆಯಲು ಸೂಸೈಡ್ ಲೈಫ್ಲೈನ್

Published On : 30 Sep 2017   |  Reported By : Canaranews network


ಮಂಗಳೂರು : ಮಾನಸಿಕ ಯಾತನೆಯಲ್ಲಿರುವವರಿಗೆ ದೂರವಾಣಿ ಮೂಲಕ ಆತ್ಮಹತ್ಯೆಯ ಯೋಚನೆಗಳನ್ನು ದೂರ ಮಾಡಲು ನೆರವಾಗುವ ಸೂಸೈಡ್ ಹೆಲ್ಪ್ ಲೈನ್ ವ್ಯವಸ್ಥೆಯನ್ನು ಸುಶೆಗ್ ಚಾರಿಟೆಬಲ್ ಟ್ರಸ್ಟ್ ಯೋಜಿಸಿದ್ದು, ಅ. 1ರಂದು ಸಂಜೆ 5 ಗಂಟೆಗೆ ಫೋರಂ ಫಿಝಾ ಮಾಲ್ನಲ್ಲಿ ಇದರ ಉದ್ಘಾಟನೆ ನಡೆಯಲಿದೆ.

ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಸೂಸೈಡ್ ಹೆಲ್ಪ್ ಲೈನ್ ನ ಸಂಯೋಜಕಿ ಸಿ| ಮಾರಿ ಇವ್ಲಿನ್ , 'ಆತ್ಮಹತ್ಯೆ ತಡೆಗಟ್ಟುವಿಕೆ' ಕುರಿತು ರೋಶನಿ ನಿಲಯದ ಸಮಾಜ ಕಾರ್ಯ ವಿಭಾಗದ ಸ್ನಾತಕೋತ್ತರ ವಿದ್ಯಾರ್ಥಿಗಳಿಂದ ಕಿರುನಾಟಕ ಈ ವೇಳೆ ಪ್ರದರ್ಶನಗೊಳ್ಳಲಿದೆ ಎಂದರು.2017ರ ಮಾರ್ಚ್ ತಿಂಗಳಲ್ಲಿ ಮಂಗಳೂರಿನಲ್ಲಿ ನಡೆಸಿದ ಸಮೀಕ್ಷೆಯಲ್ಲಿ 14ರಿಂದ 25 ವರ್ಷ ವಯಸ್ಸಿನವರಲ್ಲಿ ನಡೆಸಿದ ಸಮೀಕ್ಷೆಯಲ್ಲಿ ಶೇ. 4.52ರಷ್ಟು ವಿದ್ಯಾರ್ಥಿಗಳು ಆತ್ಮಹತ್ಯೆಗೆ ಪ್ರಯತ್ನಿಸಿದ್ದು, ಶೇ. 6.79ರಷ್ಟು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಳ್ಳುವ ಕಲ್ಪನೆ ಹೊಂದಿದ್ದಾರೆ ಎಂದು ಗೊತ್ತಾಗಿದೆ. ಇದನ್ನು ನೋಡುವುದಾದರೆ ಜಿಲ್ಲೆಯಲ್ಲಿ ಆತ್ಮಹತ್ಯೆ ಬಹುದೊಡ್ಡ ಸಮಸ್ಯೆಯಾಗಿದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳಲ್ಲಿ ಆತ್ಮಹತ್ಯೆ ಯೋಚನೆಯನ್ನು ತಡೆಗಟ್ಟಬೇಕೆಂಬ ಉದ್ದೇಶದಿಂದ ಸೂಸೈಡ್ ಲೈಫ್ಲೈನ್ನ್ನು ಪರಿಚಯಿಸಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದರು.

 




More News

ಎ.30; ಪಟ್ಲ  ಸತೀಶ್  ಶೆಟ್ಟಿ ಮಂಗಳೂರು ಪ್ರೆಸ್  ಕ್ಲಬ್ ಗೌರವ ಅತಿಥಿ
ಎ.30; ಪಟ್ಲ ಸತೀಶ್ ಶೆಟ್ಟಿ ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ

Comment Here