Saturday 10th, May 2025
canara news

ಮಂಗಳೂರು ದಸರಾ ವೈಭವದ ಶೋಭಾಯಾತ್ರೆ

Published On : 01 Oct 2017   |  Reported By : Canaranews network


ಮಂಗಳೂರು: ಮಂಗಳೂರಿಗೆ ಮಂಗಳೂರೇ ವರ್ಣಮಯವಾಗಿ ಕಂಗೊಳಿಸಿ ವಿಜೃಂಭಿಸಿದ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ "ಮಂಗಳೂರು ದಸರಾ' ಶೋಭಾಯಾತ್ರೆ ಅಪಾರ ಸಂಖ್ಯೆಯ ಭಕ್ತರ ಸಮ್ಮುಖದಲ್ಲಿ ಕ್ಷೇತ್ರದ ನವೀಕರಣದ ರೂವಾರಿ, ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ ಅವರ ಮಾರ್ಗದರ್ಶನದಲ್ಲಿ ಶನಿವಾರ ಸಂಜೆ ಆರಂಭಗೊಂಡು ರವಿವಾರ ಮುಂಜಾನೆ ಸಂಪನ್ನಗೊಂಡಿತು.ಕ್ಷೇತ್ರದಿಂದ ಶ್ರೀ ಮಹಾಗಣಪತಿ, ಆದಿಶಕ್ತಿ, ನವದುರ್ಗೆಯರು, ಶಾರದಾ ಮಾತೆ, ಬ್ರಹ್ಮಶ್ರೀ ನಾರಾಯಣ ಗುರುಗಳ ವಿಗ್ರಹಗಳ ಸಹಿತ ವರ್ಣರಂಜಿತ ದಸರಾ ಮೆರವಣಿಗೆ ಹೊರಟು ಮಣ್ಣಗುಡ್ಡ ಮಾರ್ಗವಾಗಿ ಲೇಡಿಹಿಲ್ ಸರ್ಕಲ್, ಲಾಲ್ಬಾಗ್, ಬಲ್ಲಾಳ್ಬಾಗ್, ಪಿವಿಎಸ್ ಸರ್ಕಲ್, ಕೆ.ಎಸ್. ರಾವ್ ರಸ್ತೆ, ಹಂಪನಕಟ್ಟೆ, ವಿ.ವಿ. ಕಾಲೇಜು ವೃತ್ತದಿಂದ ಬಲಕ್ಕೆ ತಿರುಗಿ, ಗಣಪತಿ ಹೈಸ್ಕೂಲ್ ಮಾರ್ಗವಾಗಿ ಶ್ರೀ ವೆಂಕಟರಮಣ ದೇವಸ್ಥಾನದ ಮುಂಭಾಗದಿಂದ ಕಾರ್ಸ್ಟ್ರೀಟ್, ಅಳಕೆಯಾಗಿ ಮಂಗಳೂರು ನಗರದ ಪ್ರಮುಖ ಬೀದಿಗಳಲ್ಲಿ ಸುಮಾರು 9 ಕಿ.ಮೀ. ಸಾಗಿ ಮತ್ತೆ ಶ್ರೀ ಕ್ಷೇತ್ರಕ್ಕೆ ತಲುಪಿತು.

ಶೋಭಾಯಾತ್ರೆಯಲ್ಲಿ ಸಾಂಸ್ಕೃತಿಕ ಮೆರುಗು ನೀಡಿದ ಕಲಾತಂಡಗಳು
ಮಂಗಳೂರು ದಸರಾದ ಶೋಭಾಯಾತ್ರೆಗೆ ವಿವಿಧ ಸಂಘ-ಸಂಸ್ಥೆಗಳ ಪ್ರವರ್ತಿತ ಧಾರ್ಮಿಕ-ಸಾಂಸ್ಕೃತಿಕ ಸ್ತಬ್ಧಚಿತ್ರ, ಹುಲಿ ವೇಷ, ನೃತ್ಯ ರೂಪಕಗಳು, ದೇಶದ ಪರಂಪರೆಯ ಟ್ಯಾಬ್ಲೋಗಳು, ತೃಶ್ಶೂರಿನ ಬಣ್ಣದ ಕೊಡೆ, ಕೇರಳದ ಚೆಂಡೆ .




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here