Saturday 10th, May 2025
canara news

ಮಂಗಳೂರು ವಿಮಾನ ನಿಲ್ದಾಣದಲ್ಲಿ ಅಮಿತ್ ಶಾಗೆ ಭರ್ಜರಿ ಸ್ವಾಗತ

Published On : 04 Oct 2017   |  Reported By : Canaranews network


ಮಂಗಳೂರು: ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮಂಗಳವಾರ ಮುಂಜಾನೆ ಮಂಗಳೂರಿಗೆ ಆಗಮಿಸಿದ್ದಾರೆ. ಅಹಮದಾಬಾದ್ ನಿಂದ ವಿಶೇಷ ವಿಮಾನದ ಮೂಲಕ ಹೊರಟ ಅಮಿತ್ ಶಾ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ರಾತ್ರಿ ಸುಮಾರು 1:30 ಗಂಟೆಗೆ ಆಗಮಿಸಿದ್ದು, ವಿಮಾನ ನಿಲ್ದಾಣದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ಕೇರಳ ಬಿಜೆಪಿಯ ಪ್ರಧಾನ ಕಾರ್ಯದರ್ಶಿ ಕೆ ಸುರೇಂದ್ರನ್, ಕೇರಳ ಬಿಜೆಪಿ ರಾಜ್ಯಾಧ್ಯಕ್ಷ ಕುಮ್ಮನಮ್ ರಾಜಶೇಖರ್ ಸೇರಿದಂತೆ ಪ್ರಮುಖ ನಾಯಕರು ಸ್ವಾಗತಿಸಿದರು.

ವಿಮಾನ ನಿಲ್ದಾಣದಿಂದ ಹೊರ ಬರುತ್ತಿದ್ದಂತೆ ಕಾರ್ಯಕರ್ತರಿಗೆ ಕೈ ಬೀಸಿ ಅಭಿನಂದನೆ ಸಲ್ಲಿಸಿದ ಶಾ, ರಾತ್ರಿಯೇ ಕೇರಳಕ್ಕೆ ತೆರಳಿದರು.ಅಮಿತ್ ಶಾ ಅವರೊಂದಿಗೆ ಕೇರಳದ ಗಡಿಭಾಗ ತಲಪಾಡಿ ತನಕ ತೆರಳಿದ ಬಿಜೆಪಿಯ ಮುಖಂಡರು ಹಾಗೂ ಕಾರ್ಯಕರ್ತರು ಬಿಜೆಪಿ ರಾಷ್ಟ್ರಾಧ್ಯಕ್ಷರನ್ನು ಬೀಳ್ಕೊಟ್ಟರು.ಕೇರಳದ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ರಾತ್ರಿ ಸುಮಾರು ೧೦.೧೫ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅಮಿತ್ ಶಾ ದೆಹಲಿಯಲ್ಲಿ ತುರ್ತು ಕಾರ್ಯಕ್ರಮ ನಿಮಿತ್ತ ಅ.೪ರಂದು ಮಂಗಳೂರು ಟಿಎಂಎ ಪೈ ಸಭಾಂಗಣದಲ್ಲಿ ನಡೆಯಬೇಕಿದ್ದ ಕಾರ್ಯಕರ್ತರ ಸಭೆಯನ್ನು ರದ್ದು ಮಾಡಿ ವಿಶೇಷ ವಿಮಾನದ ಮೂಲಕ ದೆಹಲಿಗೆ ತೆರಳಿದ್ದಾರೆ.

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here