Saturday 27th, April 2024
canara news

ಜಗದೀಶ್ ಕಾರಂತ್ ಅರ್ಜಿ ವಿಚಾರಣೆ ಮುಂದೂಡಿಕೆ

Published On : 04 Oct 2017   |  Reported By : Canaranews network


ಮಂಗಳೂರು: ಪುತ್ತೂರಿನ ಸಂಪ್ಯ ಎಸೈ ಹಾಗೂ ಸಿಬ್ಬಂದಿ ವಿರುದ್ಧ ಅವಹೇಳನಕಾರಿ ಭಾಷಣ ಮಾಡಿ ಬೆದರಿಕೆ ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿ ಹಿಂದೂ ಜಾಗರಣ ವೇದಿಕೆಯ ಮುಖಂಡ ಜಗದೀಶ್ ಕಾರಂತ್ ಅವರ ಅರ್ಜಿಯ ವಿಚಾರಣೆಯನ್ನು ಪುತ್ತೂರು ನ್ಯಾಯಾಲಯವು ಅ.೬ಕ್ಕೆ ಮುಂದೂಡಿದೆ.ನ್ಯಾಯಮೂರ್ತಿ ಜಯಂತ್ ಪಟೇಲ್ ಅವರ ವರ್ಗಾವಣೆಯನ್ನು ವಿರೋಧಿಸಿ ಬುಧವಾರ ವಕೀಲರು ನ್ಯಾಯಾಲಯದ ಕಲಾಪ ಬಹಿಷ್ಕರಿಸಿ ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಬುಧವಾರ ನಡೆಯಬೇಕಿದ್ದ ಜಗದೀಶ್ ಕಾರಂತರ ಅರ್ಜಿಯ ವಿಚಾರಣೆಯನ್ನು ಮುಂದೂಡಲಾಗಿದೆ.

ಸೆಪ್ಟಂಬರ್ 15 ರಂದು ಪುತ್ತೂರಿನಲ್ಲಿ ನಡೆದ ಹಿಂದೂ ಜಾಗರಣ ವೇದಿಕೆಯ ಪ್ರತಿಭಟನೆಯಲ್ಲಿ ಮಾತನಾಡಿದ್ದ ಜಗದೀಶ್ ಕಾರಂತ್, ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿ, ಸಂಪ್ಯ ಪೋಲೀಸ್ ಠಾಣಾಧಿಕಾರಿ ವಿರುದ್ಧ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದರು.'ಅಬ್ದುಲ್ ಖಾದರ್ ಅವರನ್ನು ತಲೆ ಬೋಳಿಸಿ ಕತ್ತೆ ಮೇಲೆ ಕೂರಿಸಿ ಯಾಕೆ ಮೆರವಣಿಗೆ ಮಾಡಬಾರದು' ಎನ್ನುವ ರೀತಿಯಲ್ಲಿ ಉದ್ರೇಕಕಾರಿ ಹೇಳಿಕೆ ನೀಡಿದ್ದರು. ಈ ಸಂಬಂಧ ಪುತ್ತೂರು ನಗರ ಪೋಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿದ್ದರು. ಸೆ.30ರಂದು ಬೆಂಗಳೂರಿನಲ್ಲಿ ಜಗದೀಶ್ ಕಾರಂತ್ ಬಂಧನವಾಗಿತ್ತು. ನಂತರ ನ್ಯಾಯಾಲಯವು ಅವರಿಗೆ ಮಧ್ಯಂತರ ಜಾಮೀನು ನೀಡಲಾಗಿತ್ತು.




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here