Saturday 10th, May 2025
canara news

ಕುಕ್ಕೆ ಸುಬ್ರಮಣ್ಯ ಕ್ಷೇತ್ರಕ್ಕೆ ಕ್ರಿಕೆಟಿಗ ಕೆ.ಎಲ್.ರಾಹುಲ್ ಭೇಟಿ

Published On : 04 Oct 2017   |  Reported By : Canaranews network


ಮಂಗಳೂರು : ಭಾರತೀಯ ಕ್ರಿಕೆಟ್ ತಂಡದ ಉದಯೋನ್ಮುಖ ತಾರೆ ಕೆ.ಎಲ್.ರಾಹುಲ್ ಮಂಗಳವಾರದಂದು ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ವಿಶೇಷ ಪೂಜೆಯನ್ನು ಸಲ್ಲಿಸಿದರು.ಕೆ.ಎಲ್.ರಾಹುಲ್ ಪ್ರತಿವರ್ಷವೂ ಕುಕ್ಕೆ ಸುಬ್ರಮಣ್ಯಕ್ಕೆ ಆಗಮಿಸಿ, ಪೂಜೆ ಸಲ್ಲಿಸುತ್ತಾರೆ. ಈ ಬಾರಿಯೂ ಆಗಮಿಸಿ ದೇವರಿಗೆ ಮಹಾಪೂಜೆ ನೆರವೇರಿಸುವ ಮೂಲಕ ತಮ್ಮ ಭಕ್ತಿ ಸಮರ್ಪಿಸಿದರು. ಕೆಲವು ವರ್ಷಗಳಿಂದ ಕೆ.ಎಲ್.ರಾಹುಲ್ ಅಂತರಾಷ್ಟ್ರೀಯ ಮಟ್ಟದ ಕ್ರಿಕೆಟ್ ನಲ್ಲಿ ಮಿಂಚುತ್ತಿರುವುದಕ್ಕೂ ಸುಬ್ರಮಣ್ಯ ದೇವರ ಸೇವೆಯೇ ಕಾರಣ ಎನ್ನುವುದು ಅವರ ಸ್ನೇಹಿತ ವರ್ಗದ ಅಭಿಪ್ರಾಯ.

ಬೆಳಗ್ಗೆ ದೇವಾಲಯಕ್ಕೆ ಆಗಮಿಸಿದ ಕೆ.ಎಲ್.ರಾಹುಲ್ ಕ್ಷೇತ್ರದಲ್ಲಿ ಪೂಜೆ ನೆರವೇರಿಸಿ, ಅನ್ನದಾನ ಪೂರೈಸಿದರು. ಮುಂದಿನ ಶನಿವಾರದಿಂದ ಪ್ರವಾಸಿ ಆಸ್ಟ್ರೇಲಿಯಾ ತಂಡದ ವಿರುದ್ಧ 3 ಪಂದ್ಯಗಳ ಟಿ 20 ಸರಣಿ ಆರಂಭಗೊಳ್ಳಲಿದೆ. ಈ ಟಿ20 ತಂಡದಲ್ಲಿ ಕೆ.ಎಲ್.ರಾಹುಲ್ ಸ್ಥಾನ ಪಡೆದಿದ್ದಾರೆ. ಈಗಾಗಲೇ ಟೆಸ್ಟ್ ಹಾಗೂ ಏಕದಿನ ಪಂದ್ಯಗಳಲ್ಲಿ ತಮ್ಮ ಸಾಮರ್ಥ್ಯ ತೋರಿರುವ ಕೆ.ಎಲ್.ರಾಹುಲ್ ಟಿ 20 ಸರಣಿಯಲ್ಲಿಯೂ ಉತ್ತಮ ಪ್ರದರ್ಶನ ನೀಡುವ ನಿರೀಕ್ಷೆಯಲ್ಲಿದ್ದಾರೆ.




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here