Friday 4th, July 2025
canara news

ನ್ಯಾ. ಜಯಂತ್ ಪಟೇಲ್ ವರ್ಗಾವಣೆ ಖಂಡಿಸಿ ವಕೀಲರ ಪ್ರತಿಭಟನೆ

Published On : 05 Oct 2017   |  Reported By : canaranews network


ಮಂಗಳೂರು: ಜಯಂತ್ ಪಟೇಲ್ ರನ್ನು ಅಲಹಾಬಾದ್ ಹೈಕೋರ್ಟ್ ನ ಮೂರನೇ ನ್ಯಾಯಾಮೂರ್ತಿಯಾಗಿ ವರ್ಗಾವಣೆಗೊಳಿಸಿದ ಕೊಲಿಜಿಯಂನ ಕ್ರಮವನ್ನು ಖಂಡಿಸಿ ಮಂಗಳೂರಿನ ವಕೀಲರ ಸಂಘವು ಬುಧವಾರ ನ್ಯಾಯಾಲಯದ ಕಲಾಪ ಬಹಿಷ್ಕರಿಸಿ ಪ್ರತಿಭಟನೆ ನಡೆಸಿತು. ಬೆಂಗಳೂರಿನಲ್ಲಿಯೂ ವಕೀಲರು ಕಲಾಪ ಬಹಿಷ್ಕರಿಸಿ ಧರಣಿ ನಡೆಸಿದರು."ಕರ್ನಾಟಕ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಎಸ್. ಕೆ. ಮುಖರ್ಜಿಯವರು ಇದೇ ಅಕ್ಟೋಬರ್ 9ರಂದು ನಿವೃತ್ತಿಯಾಗುತ್ತಿದ್ದಾರೆ.

ಅವರ ನಂತರ ಎರಡನೇ ಸ್ಥಾನದಲ್ಲಿದ್ದ ಜಯಂತ್ ಪಟೇಲ್ ಅವರಿಗೆ ಮುಖ್ಯ ನ್ಯಾಯಮೂರ್ತಿಯಾಗಿ ಬಡ್ತಿ ನೀಡಬೇಕಿತ್ತು. ಆದರೆ, ದೇಶದ ಹೈಕೋರ್ಟ್ಗಳ ನ್ಯಾಯಮೂರ್ತಿಗಳಲ್ಲೇ ಹಿರಿಯರಾದ ಜಯಂತ್ ಪಟೇಲ್ ರಿಗೆ ಭಡ್ತಿ ನೀಡದೆ 'ಕೊಲಿಜಿಯಂ' ಜಯಂತ್ ಪಟೇಲ್ರಿಗೆ ಹಿಂಭಡ್ತಿ ನೀಡುವ ಮೂಲಕ ಅನ್ಯಾಯ ಎಸಗಿದೆ," ಎಂದು ವಕೀಲರು ಆಕ್ರೋಶ ವ್ಯಕ್ತಪಡಿಸಿದರು.




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here