Friday 19th, April 2024
canara news

ಮಂಗಳೂರಲ್ಲಿ ಮತ್ತೊಂದು ಗ್ಯಾಂಗ್ ವಾರ್, ತಲ್ವಾರಿನಿಂದ ಕೊಚ್ಚಿ ಕೊಲೆ

Published On : 06 Oct 2017   |  Reported By : canaranews network


ಮಂಗಳೂರು: ಮಂಗಳೂರು ನಗರದಲ್ಲಿ ಮತ್ತೆ ಎರಡು ತಂಡಗಳ ಮಧ್ಯೆ ಘರ್ಷಣೆ ನಡೆದಿದ್ದು. ಉಳ್ಳಾಲದಲ್ಲಿ ನಡೆದ ಘರ್ಷಣೆಗೆ ಯುವಕ ಬಲಿಯಾಗಿದ್ದಾನೆ. ಮಂಗಳೂರು ಹೊರವಲಯದ ಉಳ್ಳಾಲದ ಮುಖಚ್ಚೆರಿಯಲ್ಲಿ ಎರಡು ತಂಡಗಳ ಮಧ್ಯದ ಘರ್ಷಣೆಯಲ್ಲಿ ದುಷ್ಕರ್ಮಿಗಳ ತಂಡ ಇಬ್ಬರ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿದೆ.

ಘಟನೆಯಲ್ಲಿ ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದು, ಇನ್ನೊಬ್ಬನ ಸ್ಥಿತಿ ಗಂಭೀರವಾಗಿದೆ. ಘರ್ಷಣೆಯಲ್ಲಿ ಮೃತಪಟ್ಟ ಯುವಕನನ್ನು ಜುಬೇರ್ (38) ಎಂದು ಗುರುತಿಸಲಾಗಿದೆ. ಇಲಿಯಾಸ್ ಎಂಬಾತ ಗಂಭೀರವಾಗಿ ಗಾಯಗೊಂಡಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ. ಇತ್ತೀಚೆಗೆ ಗಾಂಜಾ ಮಾರುವ ಎರಡು ತಂಡಗಳ ಮಧ್ಯೆ ನಡೆದ ಹೊಡೆದಾಟದಲ್ಲಿ ಇಬ್ಬರು ಮೃತಪಟ್ಟಿದ್ದರು. ಇದೀಗ ಮತ್ತೊಂದು ಕೊಲೆ ನಡೆದಿದ್ದು, ಜಿಲ್ಲೆಯಲ್ಲಿ ಆತಂಕದ ವಾತವರಣ ನಿರ್ಮಾಣವಾಗಿದೆ.




More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here