Saturday 10th, May 2025
canara news

ಕಾಂಗ್ರೆಸ್ ವಿರುದ್ಧ ನಳಿನ್ ಗಂಭೀರ ಆರೋಪ

Published On : 09 Oct 2017   |  Reported By : Canaranews network


ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ನ ಪ್ರಮುಖ ಮುಖಂಡರು ಗಾಂಜಾ ಹಣದಿಂದ ಬದುಕುತ್ತಿದ್ದಾರೆ ಎಂದು ಸಂಸದ ನಳಿನ ಕುಮಾರ್ ಕಟೀಲ್ ಗಂಭೀರ ಆರೋಪ ಮಾಡಿದ್ದಾರೆ.ಶುಕ್ರವಾರ ಮಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, " ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗಾಂಜಾ ದಂಧೆಗೆ ಕಾಂಗ್ರೆಸ್ ಮುಖಂಡರ ಅಭಯವಿದೆ ಎಂದು ಆರೋಪಿಸಿದರು. ಹಾಗೂ ಜಿಲ್ಲೆಯ ಹಳ್ಳಿ ಹಳ್ಳಿಯ ಗೂಡಂಗಡಿಗಳಲ್ಲಿ ಗಾಂಜಾ ದೊರೆಯುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಕಾಂಗ್ರೆಸ್ ಮುಂದಿನ ಚುನಾವಣೆಯಲ್ಲಿ ಸೋಲುವ ಭೀತಿಯಿಂದ ಗೂಂಡಾಗಳನ್ನು ಬಳಸಿ ಹತ್ಯೆ ನಡೆಸುತ್ತಿದೆ. ಉಳ್ಳಾಲದ ಮುಖಚ್ಚೇರಿಯಲ್ಲಿ ಹತ್ಯೆಯಾದ ಜುಬೇರ್ ಬಿಜೆಪಿ ಕಾರ್ಯಕರ್ತನಾಗಿದ್ದು, ಜುಬೇರ್ ಕುಂಟುಂಬಕ್ಕೆ ನ್ಯಾಯ ಒದಗಿಸಬೇಕಾಗಿದೆ. ಜುಬೇರ್ ಅವರನ್ನು ಕಾಂಗ್ರೆಸ್ ಕೃಪಾಪೋಷಿತ ಗಾಂಜಾ ದಂಧೆಕೋರರು ಹತ್ಯೆ ಮಾಡಿದ್ದು, ಪ್ರಕರಣವನ್ನು ಎನ್ಐಎಗೆ ವಹಿಸಬೇಕೆಂದು ಒತ್ತಾಯಿಸಿದರು.




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here