Saturday 24th, March 2018
canara news

ಕಾಂಕ್ರೀಟ್ ರಸ್ತೆ ಕಾಮಗಾರಿ, ನವೆಂಬರ್ನಲ್ಲಿ ಶಿರಾಡಿ ಬಂದ್

Published On : 09 Oct 2017   |  Reported By : Canaranews network


ಮಂಗಳೂರು : ಬೆಂಗಳೂರು-ಮಂಗಳೂರು ಸಂಪರ್ಕಿಸುವ ಶಿರಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿಯ 2ನೇ ಹಂತದ ರಸ್ತೆ ಅಭಿವೃದ್ಧಿ ಕಾಮಗಾರಿ ನವೆಂಬರ್ನಲ್ಲಿ ಆರಂಭವಾಗುವ ನಿರೀಕ್ಷೆಯಿದೆ. 12.38ಕಿ.ಮೀ.ರಸ್ತೆಯನ್ನು ಕಾಂಕ್ರೀಟ್ ರಸ್ತೆಯಾಗಿ ಅಭಿವೃದ್ಧಿ ಮಾಡಲಾಗುತ್ತದೆ.ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಕೆಂಪುಹೊಳೆ ಸೇತುವೆಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಅಡ್ಡಹೊಳೆ ಸೇತುವೆ ತನಕ 12.37 ಕಿ.ಮೀ.ರಸ್ತೆಯನ್ನು ಕಾಂಕ್ರೀಟ್ ರಸ್ತೆಯಾಗಿ ಅಭಿವೃದ್ಧಿ ಮಾಡಲಾಗುತ್ತದೆ.

ಈ ಕಾಮಗಾರಿ ನಡೆಯುವ ಸಂದರ್ಭದಲ್ಲಿ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗುತ್ತದೆ.ಮಳೆಯಿಂದಾಗಿ ಸದಾ ಹಾಳಾಗುವ ಶಿರಾಡಿ ಘಾಟ್ ರಸ್ತೆಯನ್ನು ಎರಡು ಹಂತದಲ್ಲಿ ಅಭಿವೃದ್ಧಿ ಮಾಡಲು ಲೋಕೋಪಯೋಗಿ ಇಲಾಖೆ ಯೋಜನೆ ರೂಪಿಸಿತ್ತು. 13.62 ಕಿ.ಮೀ. ಉದ್ದದ ರಸ್ತೆಯನ್ನು 2015ರಲ್ಲಿ ಕಾಂಕ್ರೀಟ್ ರಸ್ತೆಯಾಗಿ ಅಭಿವೃದ್ಧಿಪಡಿಸಲಾಗಿತ್ತು.
More News

ಶಿಕಾರಿಗೆ ಹೋಗಿದ್ದ ಯುವಕರು ಶವವಾಗಿ ಪತ್ತೆ
ಶಿಕಾರಿಗೆ ಹೋಗಿದ್ದ ಯುವಕರು ಶವವಾಗಿ ಪತ್ತೆ
 14 ವರ್ಷದ ಬಳಿಕ ಅತ್ಯಾಚಾರ ಪ್ರಕರಣದ ಆರೋಪಿ ಸೆರೆ
14 ವರ್ಷದ ಬಳಿಕ ಅತ್ಯಾಚಾರ ಪ್ರಕರಣದ ಆರೋಪಿ ಸೆರೆ
ಅಶಕ್ತರ ಕಣ್ಣೀರು ಒರೆಸುವ ಮುನಿಯಾಲು ಉದಯ ಕೆ.ಶೆಟ್ಟಿ
ಅಶಕ್ತರ ಕಣ್ಣೀರು ಒರೆಸುವ ಮುನಿಯಾಲು ಉದಯ ಕೆ.ಶೆಟ್ಟಿ

Comment Here