Thursday 28th, March 2024
canara news

ಆಳ್ವಾಸ್ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Published On : 16 Oct 2017   |  Reported By : Gurudatt Somayaji


ಮಿಜಾರಿನ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಮೆಕ್ಯಾನಿಕಲ್ ವಿಭಾಗದ ವಿದ್ಯಾರ್ಥಿಗಳಿಗೆ ಒಂದು ದಿನದ ಕಾರ್ಯಾಗಾರವನ್ನು ಅಕ್ಟೋಬರ್ 12 ರಂದು ಆಯೋಜಿಸಲಾಗಿತ್ತು. ಈ ಕಾರ್ಯಾಗಾರದಲ್ಲಿ ವಿದ್ಯಾರ್ಥಿಗಳಿಗೆ ಮಿಜಾರ್ ಎಲೆಕ್ಟ್ರಿಕಲ್ ನ ಮಾಲೀಕರಾದ ಸದಾನಂದ ರವರು ಪ್ರಾಯೋಗಿಕವಾಗಿ ಪಂಪ್, ಮೋಟಾರ್ ಮತ್ತು ವೈಂಡಿಂಗ್ ಮಷೀನ್ ಉಪಯೋಗ ಹಾಗೂ ಕಾರ್ಯ ನಿರ್ವಹಣೆಯ ಬಗ್ಗೆ ಮತ್ತು ದುರಸ್ತಿ ಮಾಡುವುದರ ಕುರಿತು ಉಪಯುಕ್ತ ಮಾಹಿತಿಗಳನ್ನು ನೀಡಿದರು .

ಈ ಕಾರ್ಯಕ್ರಮವನ್ನು ವಿಭಾಗದ ಟೆಕ್ನಿಕಲ್ ಕ್ಲಬ್ ವತಿಯಿಂದ ಆಯೋಜಿಸಲಾಗಿತ್ತು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ ಮಾತನಾಡಿ ವಿದ್ಯಾರ್ಥಿಗಳು ಪ್ರಾಯೋಗಿಕ ಚಟುವಟಿಕೆಗಳಲ್ಲಿ ತಮ್ಮನ್ನು ತಾವು ಹೆಚ್ಚು ತೊಡಗಿಸಿಕೊಳ್ಳಬೇಕು ಎಂದು ಕರೆಯಿತ್ತರು. ವಿಭಾಗ ಮುಖ್ಯಸ್ಥರಾದ ಪ್ರೊ. ಕೆ. ವಿ. ಸುರೇಶ್ ಮತ್ತು ಟೆಕ್ನಿಕಲ್ ಕ್ಲಬ್ ನ ಸದಸ್ಯರು ಉಪಸ್ಥಿತರಿದ್ದರು .




More News

ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
 ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ
ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ

Comment Here