Saturday 10th, May 2025
canara news

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್ ಅಧಿಕಾರ ಸ್ವೀಕಾರ

Published On : 21 Oct 2017   |  Reported By : Courtesy: oneindia   |  Pic On: Photo credit-oneindia


ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಶಶಿಕಾಂತ್ ಸೆಂಥಿಲ್ ಎಸ್. ಗುರುವಾರ ಮಂಗಳೂರಿನಲ್ಲಿ ಅಧಿಕಾರ ಸ್ವೀಕರಿಸಿದರು. ಶಶಿಕಾಂತ್ ಸೆಂಥಿಲ್ ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರಭಾರ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದ ಕುಮಾರ್ ಅವರು ನೂತನ ಜಿಲ್ಲಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರಿಸಿ, ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಎಂ.ಆರ್. ರವಿ, ಮಂಗಳೂರು ಸಹಾಯಕ ಆಯುಕ್ತ ರೇಣುಕಾ ಪ್ರಸಾದ್, ಜಿ.ಪಂ. ಉಪಕಾರ್ಯದರ್ಶಿ ಎನ್.ಆರ್. ಉಮೇಶ್ ಹಾಗೂ ಜಿಲ್ಲಾ ಮಟ್ಟದ ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.

ಶಶಿಕಾಂತ್ ಸೆಂಥಿಲ್ ಈ ಹಿಂದೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ನಿರ್ದೇಶಕರಾಗಿದ್ದರು. ಈ ಹಿಂದಿನ ಜಿಲ್ಲಾಧಿಕಾರಿ ಕೆ.ಜಿ. ಜಗದೀಶ್ ರನ್ನು ಕೆಲವು ದಿನಗಳ ಹಿಂದೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ನಿರ್ದೇಶಕರಾಗಿ ವರ್ಗ ಮಾಡಲಾಗಿತ್ತು.

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here