Saturday 5th, July 2025
canara news

ಬಿಲ್ಲವ ಮುಖಂಡ ಹರಿಕೃಷ್ಣ ಬಂಟ್ವಾಳ ಬಿಜೆಪಿಗೆ- ಘೋಷಣೆ

Published On : 23 Oct 2017   |  Reported By : canaranews network


ಮಂಗಳೂರು: ಮಹತ್ವದ ಬೆಳವಣಿಗೆಯೊಂದರಲ್ಲಿ, ಬಿಲ್ಲವ ಮುಖಂಡ ಹರಿಕೃಷ್ಣ ಬಂಟ್ವಾಳ ಅವರು ಅಧಿಕೃತವಾಗಿ ಬಿಜೆಪಿಗೆ ಸೇರುವುದಾಗಿ ಘೋಷಿಸಿದ್ದಾರೆ. ನ. 10ರಂದು ನಡೆಯಲಿರುವ ಪಕ್ಷದ ಪರಿವರ್ತನಾ ರ್ಯಾಲಿಯಲ್ಲಿ ಬಿಜೆಪಿ ಸೇರುವುದಾಗಿ ಸ್ವತಃ ಹರಿಕೃಷ್ಣ ಅವರೇ ಹೇಳಿದ್ದಾರೆ. ಮಂಗಳೂರಿನ ಖಾಸಗಿ ಹೊಟೇಲ್ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಿಲ್ಲವ ಸಂಘಟನೆಗಳ ಮುಖಂಡರೊಡನೆ ನಡೆಸಿದ ಸಮಾಲೋಚನ ಸಭೆಯಲ್ಲಿ ಈ ನಿರ್ಧಾರ ಪ್ರಕಟಿಸಿದ್ದಾರೆ. "ವರ್ಷಗಳ ಹಿಂದೆ ಅತ್ಯಧಿಕ ಬಿಲ್ಲವ ಸಮುದಾಯದ ಶಾಸಕರು, ಸಚಿವರು ಜಿಲ್ಲೆಯಲ್ಲಿದ್ದರು. ಕ್ರಮೇಣ ರಾಜಕೀಯ ಷಡ್ಯಂತ್ರಕ್ಕೆ ಪೂಜಾರಿ ಸೇರಿದಂತೆ ಬಿಲ್ಲವ ಸಮುದಾಯದವರು ಬಲಿಪಶುಗಳಾದರು. ದ.ಕ. ಜಿಲ್ಲೆಯಲ್ಲಿ ಬಿಲ್ಲವ ಸಮುದಾಯದ ಮತದಾರರು ಅಧಿಕ ಸಂಖ್ಯೆಯಲ್ಲಿದ್ದಾರೆ.

ಆದರೆ ಒಂದು ಎಂಎಲ್ಸಿ ಸೀಟಿಗೂ ಬೇಡುವ ಪರಿಸ್ಥಿತಿ ಬಂದಿದೆ. ಈ ನಿಟ್ಟಿನಲ್ಲಿ ಸಮುದಾಯದ ಜನರು ಒಗ್ಗಟ್ಟಾಗಬೇಕಾಗಿದೆ' ಎಂದು ಹೇಳಿದರು."ಬಿಲ್ಲವ ಸಮುದಾಯವಾಗಲಿ, ಕಾಂಗ್ರೆಸ್ ಪಕ್ಷವಾಗಲಿ ಯಾವುದೇ ಕಾರಣಕ್ಕೂ ಇನ್ನೊಂದು ಜನಾರ್ದನ ಪೂಜಾರಿ ಅವರನ್ನು ಸೃಷ್ಟಿಸಲು ಸಾಧ್ಯವಿಲ್ಲ. ಬಹುತೇಕ ಮಂದಿ ನಾಯಕರನ್ನು ರಾಜಕೀಯಕ್ಕೆ ತಂದ ಪೂಜಾರಿ ಅವರು ಇಂದು ಯಾರಿಗೂ ಬೇಡವಾಗಿದ್ದಾರೆ. ಇಂದು ಬಿಲ್ಲವ ಸಮುದಾಯವನ್ನೇ ರಾಜಕೀಯದಿಂದ ದೂರ ಇಡುವ ಪ್ರಯತ್ನವಾಗುತ್ತಿದೆ. ಇದಕ್ಕೆ ಉತ್ತರ ನೀಡುವ ನಿಟ್ಟಿನಲ್ಲಿ ಬಿಜೆಪಿಗೆ ತೆರಳುತ್ತಿದ್ದೇನೆ' ಎಂದು ಅವರು ತಮ್ಮ ಅಸಮಾಧಾನ ಹೊರಹಾಕಿ ಬಿಜೆಪಿ ಸೇರುವ ನಿರ್ಧಾರ ಪ್ರಕಟಿಸಿದ್ದಾರೆ.




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here