Saturday 20th, April 2024
canara news

ಧರ್ಮಸ್ಥಳಕ್ಕೆ ಆಗಮಿಸುವ ಮೋದಿಗೆ ತುಳುನಾಡಿನ ಶೈಲಿಯಲ್ಲಿ ಸ್ವಾಗತ

Published On : 26 Oct 2017   |  Reported By : canaranews network


ಮಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಅಕ್ಟೋಬರ್ 29 ಆಗಮಿಸುವುದು ಖಚಿತವಾಗಿರುವ ಹಿನ್ನಲೆಯಲ್ಲಿ ಶ್ರೀ ಕ್ಷೇತ್ರದಲ್ಲಿ ಭರ್ಜರಿ ಸಿದ್ಧತೆಗಳು ನಡೆದಿವೆ.ತುಳುನಾಡಿನ ಶೈಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಸ್ವಾಗತ ನಡೆಸಲು ಧರ್ಮಸ್ಥಳದ ಧರ್ಮಾಧಿಕಾರಿ ಡಾ ಡಿ ವೀರೇಂದ್ರ ಹೆಗ್ಗಡೆ ಅವರು ಎಲ್ಲಾ ರೀತಿಯ ಸಿದ್ಧತೆಗಳನ್ನು ಕೈಗೊಂಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅಕ್ಟೋಬರ್ 29 ರಂದು ಬೆಳಗ್ಗೆ 11:30ಕ್ಕೆ ಧರ್ಮಸ್ಥಳದ ಮಂಜುನಾಥ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ನಂತರ ಉಜಿರೆಯ ರತ್ನವರ್ಮ ಕ್ರೀಡಾಂಗಣದಲ್ಲಿ ಮೋದಿ ಬಹಿರಂಗ ಸಭೆ ನಡೆಸಲಿದ್ದಾರೆ.ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಬ್ಯಾಂಕುಗಳ ಸಹಭಾಗಿತ್ವದಲ್ಲಿ ರಾಜ್ಯದ 12 ಲಕ್ಷ ಸ್ವ ಸಹಾಯ ಸಂಘಗಳ ಸದಸ್ಯರಿಗೆ ಜನ್ ಧನ್ ಯೋಜನೆ ಅನ್ವಯ ಬ್ಯಾಂಕ್ ಖಾತೆಗಳನ್ನು ತೆರೆದಿದ್ದು, ಈ ಸದಸ್ಯರಿಗೆ ಕಾರ್ಡ್ ಗಳನ್ನು ಪ್ರಧಾನಿ ವಿತರಿಸಲಿದ್ದಾರೆ.

 

 




More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here