Thursday 25th, April 2024
canara news

ಮಂಗಳೂರು ಮೇಯರ್ ಕವಿತಾ ವಿರುದ್ಧ ದೂರು ದಾಖಲು

Published On : 29 Oct 2017   |  Reported By : Canaranews network


ಮಂಗಳೂರು: ಅಪಾರ್ಟ್ ಮೆಂಟ್ನ ವಾಚ್ ಮನ್ ಕುಟಂಬದ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಮಂಗಳೂರು ಮೇಯರ್ ಕವಿತಾ ಸನೀಲ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಪಾಂಡೇಶ್ವರದ ಮಹಿಳಾ ಠಾಣೆಯಲ್ಲಿ ವಾಚ್ ಮನ್ ಪುಂಡಲೀಕ ಅವರ ಪತ್ನಿ ಕಮಲಾ ದೂರು ದಾಖಲಿಸಿದ್ದಾರೆ.ಹಲ್ಲೆ ಪ್ರಕರಣ ಈಗ ರಾಜಕೀಯ ತಿರುವು ಪಡೆದುಕೊಂಡಿದೆ. ಬಿಜೆಪಿ ಮುಖಂಡರು ಮೇಯರ್ ವಾಸವಿರುವ ಅಪಾರ್ಟ್ ಮೆಂಟ್ ಗೆ ತೆರಳಿ ವಾಚ್ ಮನ್ ಹಾಗೂ ಪತ್ನಿಯ ಭೇಟಿ ಮಾಡಿ, ಮಾಹಿತಿ ಸಂಗ್ರಹಿಸಿದ್ದಾರೆ . ಅಲ್ಲದೆ ಮಂಗಳೂರು ಮಹಾನಗರ ಪಾಲಿಕೆಯ ವಿರೋಧ ಪಕ್ಷದ ಬಿಜೆಪಿ ಮುಖಂಡರು ಸಂತ್ರಸ್ತರ ಬೆಂಬಲಕ್ಕೆ ನಿಂತಿದ್ದಾರೆ.

ಹಲ್ಲೆ ಪ್ರಕರಣದ ಕುರಿತು ಪ್ರತಿಕ್ರಿಯಿಸಿರುವ ಮಂಗಳೂರು ಮೇಯರ್ ಕವಿತಾ ಸನಿಲ್, ಅಪಾರ್ಟ್ ಮೆಂಟ್ ನ ವಾಚ್ ಮನ್, ಅವರ ಪತ್ನಿ ಹಾಗೂ ಮಗುವಿನ ಮೇಲೆ ಹಲ್ಲೆ ಮಾಡಿರುವ ಆರೋಪವನ್ನು ತಳ್ಳಿಹಾಕಿದ್ದಾರೆ. ಬಿಜೆಪಿ ಮುಖಂಡರಾದ ಪೂಜಾ ಪೈ ಹಾಗೂ ರೂಪಾ ಬಂಗೇರ ಅಪಾರ್ಟ್ ಮೆಂಟ್ ಗೆ ಆಗಮಿಸಿ ವಾಚ್ ಮೆನ್ ಹಾಗೂ ಅವರ ಕುಟುಂಬಕ್ಕೆ ನನ್ನ ವಿರುದ್ಧ ಸುಳ್ಳು ಆರೋಪ ಹೊರಿಸಲು ಪ್ರೋತ್ಸಾಹಿಸಿದ್ದಾರೆ ಎಂದಿದ್ದಾರೆ.ಈ ಪ್ರಕರಣ ರಾಜಕೀಯ ಪ್ರೇರಿತ ಎಂದು ಮೇಯರ್ ಕವಿತಾ ಸನಿಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here