Saturday 5th, July 2025
canara news

ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಹ್ಯಾಕಥಾನ್ ಕಾರ್ಯಾಗಾರ

Published On : 31 Oct 2017   |  Reported By : Gurudatt Somayaji


ಮಿಜಾರು ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗದ ವತಿಯಿಂದ ಹ್ಯಾಕಥಾನ್ ಬಗ್ಗೆ ಎರಡು ದಿನಗಳ ಕಾರ್ಯಾಗಾರವನ್ನು ನಡೆಸಲಾಯಿತು .

ಭಾರತೀಯ ವಿಜ್ಞಾನ ಸಂಸ್ಥೆಯ ವಿಜ್ಞಾನಿ ಪ್ರೊ ಹರೀಶ್ ಭಟ್ ಕಾರ್ಯಾಗಾರವನ್ನು ಉದ್ಘಾಟಿಸಿದರು . ಅವರು ಈ ಸಂದರ್ಭದಲ್ಲಿ ವೆಬ್ ಸೈಟ್ ಗಳನ್ನು ರಚಿಸುವಾಗ ಅಳವಡಿಸಬೇಕಾದ ಸುರಕ್ಷತಾ ಕೋಡ್ ಗಳ ಬಗ್ಗೆ ಮಾಹಿತಿಯನ್ನು ಒದಗಿಸಿದರು . ಸಂಪನ್ಮೂಲ ವ್ಯಕ್ತಿಯಾಗಿ ಬೆಂಗಳೂರಿನ ಸಿನೋಪ್ಸಿಸ್ ಸಂಸ್ಥೆಯ ಹಿರಿಯ ತಾಂತ್ರಿಕ ಅಧಿಕಾರಿ ರಾಕೇಶ್ ಚಾಯೆಲ್ ಭಾಗವಹಿಸಿದ್ದರು .

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಮ್ಯಾನೇಜಿಂಗ್ ಟ್ರಸ್ಟಿ ವಿವೇಕ್ ಆಳ್ವ , ವಿಭಾಗದ ಮುಖ್ಯಸ್ಥ ಮಂಜುನಾಥ್ ಕೊಟ್ಟಾರಿ ಮತ್ತು ಪ್ರಾಧ್ಯಾಪಕರು ಉಪಸ್ಥಿತರಿದ್ದರು .

ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಸುಮಾರು 150 ಕ್ಕೂ ಅಧಿಕ ವಿದ್ಯಾರ್ಥಿಗಳು, ಉಪನ್ಯಾಸಕರು ಮತ್ತು ಸಿಬಂದಿ ವರ್ಗದವರು ಈ ಕಾರ್ಯಾಗಾರದ ಪ್ರಯೋಜನವನ್ನು ಪಡೆದುಕೊಂಡರು .

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here