Saturday 10th, May 2025
canara news

ಧರ್ಮಸ್ಥಳ ಲಕ್ಷ ದೀಪೋತ್ಸವ : ಸಮಾಲೋಚನಾ ಸಭೆ

Published On : 01 Nov 2017   |  Reported By : Rons Bantwal


ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ ಲಕ್ಷದೀಪೋತ್ಸವ ನವೆಂಬರ್ 13ರಿಂದ 18ರ ವರೆಗೆ ನಡೆಯಲಿದ್ದು ಪೂರ್ವ ಸಿದ್ಧತೆಗಳ ಬಗ್ಗೆ ಸಮಾಲೋಚನಾ ಸಭೆ ಮಂಗಳವಾರ ಶ್ರೀ ಸನ್ನಿಧಿ ಅತಿಥಿ ಗೃಹದಲ್ಲಿ ನಡೆಯಿತು.

ಧರ್ಮಸ್ಥಳಕ್ಕೆ ಮಂಗಳೂರು, ಪುತ್ತೂರು, ಪೆರಿಯಶಾಂತಿ, ಚಾರ್ಮಾಡಿ, ಪಟ್ಟಮೆ ಕಾರ್ಕಳ, ಬೆಳಾಲು, ನೆರಿಯಾ ಮೊದಲಾದ ಊರುಗಳಿಂದ ಸಂಪರ್ಕ ಕಲ್ಪಿಸುವ ರಸ್ತೆಗಳ ದುರಸ್ತಿ ಕಾರ್ಯವನ್ನು ಶೀಘ್ರ ಪೂರ್ಣಗೊಳಿಸುವಂತೆ ಸಚಿವ ಬಿ. ರಮಾನಾಥ ರೈ ಲೋಕೋಪಯೋಗಿ ಇಲಾಖಾ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಕೆ.ಎಸ್.ಆರ್.ಟಿ.ಸಿ. ವತಿಯಿಂದ ರಾಜ್ಯದ ವಿವಿಧ ಭಾಗಗಳಿಂದ ವಿಶೇಷ ಬಸ್ ಸೌಲಭ್ಯ ಒದಗಿಸುವುದಾಗಿ ಅಧಿಕಾರಿಗಳು ತಿಳಸಿದರು.

ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಮೆಸ್ಕಾಂ, ಅಗ್ನಿಶಾಮಕ, ಗೃಹ ರಕ್ಷಕ ದಳ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ಆದಷ್ಟು ಶೀಘ್ರ ಎಲ್ಲಾ ಸಮಸಯೆಗಳನ್ನು ಪರಿಹರಿಸಲು ಸಚಿವರು ಸಲಹೆ ನೀಡಿದರು.

ಲಕ್ಷ ದೀಪೋತ್ಸವದ ಮೊದಲ ಆಮಂತ್ರಣ ಪತ್ರವನ್ನು ಸಚಿವ ರಮಾನಾಥ ರೈ ಗಳಿಗೆ ನೀಡಿ ಸ್ವಾಗತಿಸಿದ ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ ಲಕ್ಷ ದೀಪೋತ್ಸವಕ್ಕೆ ಬರುವ ಭಕ್ತರನ್ನು ಅತಿಥಿಗಳಾಗಿ ಸ್ವಾಗತಿಸಿ ಎಲ್ಲರೂ ಸಮರ್ಪಣಾ ಭಾವದಿಂದ ಕೆಲಸ ಮಾಡಬೇಕು. ಸರ್ಕಾರದ ಎಲ್ಲಾ ಇಲಾಖಾ ಅಧಿಕಾರಿಗಳು ಕರ್ತವ್ಯಕ್ಕೆ ಬದ್ಧರಾಗಿ, ಸಿದ್ಧರಾಗಿ ತಮ್ಮ ಕರ್ತವ್ಯ ಮಾಡಬೇಕು.
ಉತ್ಸವ ಯಶಸ್ವಿಗೆ ದೇವರ ಅನುಗ್ರಹದೊಂದಿಗೆ ಮನುಷ್ಯ ಪ್ರಯತ್ನವೂ ಅಗತ್ಯ ಎಂದು ಅವರು ಅಭಿಪ್ರಾಯಪಟ್ಟರು.

ಡಿ. ಹರ್ಷೇಂದ್ರ ಕುಮಾರ್ ಉಪಸ್ಥಿತರಿದ್ದರು.

ಸಹಾಯಕ ಆಯುಕ್ತ ರಘುನಂದನ್ ಮೂರ್ತಿ, ದ.ಕ. ಜಿಲ್ಲಾ ಪಂಚಾಯತಿ ಅಧ್ಯಕ್ಷೆ, ಮೀನಾಕ್ಷಿ ಶಾಂತಿಗೋಡು, ಜಿಲ್ಲಾ ಆರೋಗ್ಯಾಧಿಕಾರಿ ರಾಮಕೃಷ್ಣ ರಾವ್, ಜಿಲ್ಲಾ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಸಾಹುಲ್ ಹಮೀದ್, ಧಾರ್ಮಿಕ ಮತ್ತು ದತ್ತಿ ಇಲಾಖಾ ಸಹಾಯಕ ಆಯುಕ್ತೆ ಕೆ. ಪ್ರಮೀಳಾ, ಬೆಳ್ತಂಗಡಿ ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ದಿವ್ಯಜ್ಯೋತಿ ಉಪಸ್ಥಿತರಿದ್ದು ಸೂಕ್ತ ಸಲಹೆ-ಸೂಚನೆ ನೀಡಿದರು.
ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಬಿ. ಯಶೋವರ್ಮ ಸ್ವಾಗತಿಸಿದರು. ಸುಭಾಶ್ಚಂದ್ರ ಜೈನ್ ಧನ್ಯವಾದವಿತ್ತರು.


ಧರ್ಮಸ್ಥಳ ಲಕ್ಷ ದೀಪೋತ್ಸವ: ಸರ್ವ ಧರ್ಮ ಸಮ್ಮೇಳನ ಮತ್ತು ಸಾಹಿತ್ಯ ಸಮ್ಮೇಳನ (ಆಲ್ ಎಡಿಶನ್)

ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ ಶ್ರೀ ಮಂಜುನಾಥ ಸ್ವಾಮಿಯ ಲಕ್ಷ ದೀಪೋತ್ಸವ ಕಾರ್ಯಕ್ರಮಗಳು ಇದೇ 13 ರಿಂ 18ರ ವರೆಗೆ ನಡೆಯಲಿವೆ.

ಸರ್ವ ಧರ್ಮ ಸಮ್ಮೇಳನ ಮತ್ತು ಸಾಹಿತ್ಯ ಸಮ್ಮೇಳನ: ಇದೇ 16ರಂದು ಗುರುವಾರ ಸರ್ವ ಧರ್ಮ ಸಮ್ಮೇಳನದ 85ನೇ ಅಧಿವೇಶನವನ್ನಯ ವೆಲ್ಲೂರಿನ ಶ್ರೀ ನಾರಾಯಣೀ ಪೀಠಮ್‍ನ ಶ್ರೀ ಶಕ್ತಿ ಅಮ್ಮ ಉದ್ಘಾಟಿಸುವರು.

ರಾಜ್ಯದ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಅಧ್ಯಕ್ಷತೆ ವಹಿಸುವರು.

ಪ್ರಜಾವಾಣಿ ದೈನಿಕದ ನಿವೃತ್ತ ಕಾರ್ಯನಿರ್ವಾಹಕ ಸಂಪಾದಕ ಪದ್ಮರಾಜ ದಂಡಾವತಿ, ಮಾಜಿ ಶಾಸಕ ಶಫಿ ಅಹಮ್ಮದ್ ಮತ್ತು ಹೆಂಗಳೂರಿನ ಫಾದರ್ ಅಂತೋನಿ ರಾಜ್ ಧಾರ್ಮಿಕ ಉಪನ್ಯಾಸ ನೀಡುವರು.

ರಾತ್ರಿ 9 ರಿಂದ ಕಿರುತೆರೆ ಕಲಾವಿದರಾದ ಮೈಸೂಉ ಮಂಜುನಾಥ ಹಾಗೂ ಮೈಸೂರು ನಾಗರಾಜ ವೃಂದದವರಿಂದ ಪಿಟೀಲು ಜುಗಲ್‍ಬಂದಿ ಕಾರ್ಯಕ್ರಮವಿದೆ.

ಇದೇ 17ರಂದು ಶುಕ್ರವಾರ ಸಾಹಿತ್ಯ ಸಮ್ಮೇಳನದ 85ನೇ ಅಧಿವೇಶನವನ್ನು ಖ್ಯಾತ ಸಾಹಿತಿ ಸುಧಾಮೂರ್ತಿನ ಉದ್ಘಾಟಿಸುವರು. ಬೆಂಗಳೂರಿನ ಸಾಹಿತಿ ಬಿ.ಆರ್. ಲಕ್ಷ್ಮಣರಾವ್ ಅಧ್ಯಕ್ಷತೆ ವಹಿಸುವರು.

ಖ್ಯಾತ ವಿಮರ್ಶಕ ಎಸ್. ಆರ್. ವಿಜಯಶಂಕರ್, ಸಾಹಿತಿ ರಂಜಾನ್ ದರ್ಗಾ ಮತ್ತು ಮಂಗಳೂರಿನ ಪ್ರೊ. ಭುವನೇಶ್ವರಿ ಹೆಗಡೆ ಉಪನ್ಯಾಸ ನೀಡುವರು.
ರಾತ್ರಿ 9 ರಿಂದ ಬೆಂಗಳೂರಿನ ರಾಧಾ ಕಲ್ಪ ನೃತ್ಯ ತಂಡದ ಕಲಾವಿದರಿಂದ ಭರತನಾಟ್ಯ ಪ್ರದರ್ಶನವಿದೆ.

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here