Saturday 10th, May 2025
canara news

ಮಂಗಳೂರಲ್ಲಿ ಮಟ್ಕಾ ಅಡ್ಡೆ ಮೇಲೆ ಸಿಸಿಬಿ ದಾಳಿ, 6 ಜನರ ಬಂಧನ

Published On : 04 Nov 2017   |  Reported By : Canaranews network


ಮಂಗಳೂರು: ಮಂಗಳೂರು ನಗರದಲ್ಲಿ ಮಟ್ಕಾ ದಂಧೆ ನಡೆಸುತ್ತಿದ್ದ 6 ಮಂದಿಯನ್ನು ಮಂಗಳೂರಿನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.ಮಂಗಳೂರಿನ ಸರ್ವಿಸ್ ಬಸ್ ನಿಲ್ದಾಣದ ಪರಿಸರದಲ್ಲಿ ಅಕ್ರಮವಾಗಿ ಮಟ್ಕಾ ದಂಧೆ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ದಾಳಿ ನಡೆಸಿದ ಸಿಸಿಬಿ ಪೊಲೀಸರು 6 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.ಬಂಧಿತರನ್ನು ರಾಕೇಶ್ ಪೂಜಾರಿ (32), ದಯಾನಂದ (44), ಅಶೋಕ್ (44), ನಂದನ್ (28), ಮಹಮ್ಮದ್ ಯಾಸಿನ್ (21), ಇಮ್ತಿಯಾಸ್ ಅಹಮ್ಮದ್ (44) ಎಂದು ಗುರುತಿಸಲಾಗಿದೆ.

ಬಂಧಿತರಿಂದ ಮಟ್ಕಾ ಆಟಕ್ಕೆ ಬಳಸಿದ 17,970 ರೂಪಾಯಿ ನಗದು, ಮಟ್ಕಾ ನಂಬ್ರ ಬರೆದ ಚೀಟಿಗಳು, 7 ಮೊಬೈಲ್ ಫೋನ್ ಗಳು ಹಾಗೂ ಒಂದು ದ್ವಿಚಕ್ರ ವಾಹನವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ರೂ. 56,770 ರೂಪಾಯಿ ಎಂದು ಅಂದಾಜಿಸಲಾಗಿದೆ.




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here