Saturday 10th, May 2025
canara news

ಕಾಡು ಹಂದಿ ದಾಳಿಗೆ ವ್ಯಕ್ತಿ ಸಾವು

Published On : 04 Nov 2017   |  Reported By : Canaranews network


ಮಂಗಳೂರು: ಕಾಡು ಹಂದಿಯ ದಾಳಿಗೆ ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ಪುತ್ತಿಲ ಗ್ರಾಮದ ಮಡಪ್ಪಾಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.

ಶಾಂತಪ್ಪ ಪೂಜಾರಿ ಅವರ ಪುತ್ರ ಗಂಗಾಧರ್ ಪೂಜಾರಿ (44) ಎಂಬವರು ಬಳ್ಳಿ ತರಲು ಕಾಡಿಗೆ ತೆರಳಿದ್ದರು. ಆದರೆ ಸಂಜೆಯಾದರೂ ಗಂಗಾಧರ ಪೂಜಾರಿ ಮನೆಗೆ ಮರಳಿರಲಿಲ್ಲ .

ಈ ಹಿನ್ನೆಲೆಯಲ್ಲಿ ಮನೆಯವರು ಎಲ್ಲೆಡೆ ಹುಡುಕಾಟ ನಡೆಸಿದ್ದಾರೆ. ಕಾಡಿನಲ್ಲಿ ಹುಡುಕಾಟ ನಡೆಸುವ ಸಂದರ್ಭದಲ್ಲಿ ನೀರು ಹರಿಯುವ ತೊರೆಯ ಬಳಿ ಗಂಗಾಧರ್ ಪೂಜಾರಿ ಅವರ ಮೃತದೇಹ ಪತ್ತೆಯಾಗಿದೆ.ಈ ಬಗ್ಗೆ ಮೃತರ ಪತ್ನಿ ಜಯಶ್ರೀ ಎಂಬುವರು ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ತನ್ನ ಗಂಡ ಕಾಡು ಹಂದಿ ತಿವಿದು ಮೃತಪಟ್ಟಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.ಘಟನೆ ನಡೆದ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here