Sunday 11th, May 2025
canara news

ದ್ವಿಚಕ್ರ ವಾಹನ ಚಾಲನೆ ಸಂದರ್ಭ ಮೊಬೈಲ್ ಬಳಕೆ ವಿರುದ್ಧ ಕ್ರಮ: ಕಮಿಷನರ್

Published On : 05 Nov 2017   |  Reported By : Canaranews network


ಮಂಗಳೂರು: ದ್ವಿಚಕ್ರ ವಾಹನ ಸವಾರರು ಚಾಲನೆ ಸಂದರ್ಭದಲ್ಲಿ ಮೊಬೈಲ್ ಫೋನ್ನಲ್ಲಿ ಮಾತನಾಡುತ್ತಿರುವುದು ಅಪಘಾತಗಳಿಗೆ ಕಾರಣವಾಗುತ್ತಿರುವ ಪ್ರಕರಣಗಳು ಹೆಚ್ಚುತಿವೆ.

ಈ ಬಗ್ಗೆ ತಪಾಸಣೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಆಯುಕ್ತ ಟಿ.ಆರ್. ಸುರೇಶ್ ತಿಳಿಸಿದರು. ಶುಕ್ರವಾರ ತಮ್ಮ ಕಚೇರಿಯಲ್ಲಿ ಜರಗಿದ ಫೋನ್ಇನ್ ಕಾರ್ಯಕ್ರಮದಲ್ಲಿ ಅವರು ಮಹಿಳೆಯೊಬ್ಬರು ಮಾಡಿದ ಕರೆಗೆ ಉತ್ತರಿಸಿದರು.

ಮಂಗಳೂರಿನ ಹೈಲ್ಯಾಂಡ್ನ ಎಸ್.ಎಲ್. ಮಥಾಯಸ್ ರಸ್ತೆಯಲ್ಲಿ ಇತ್ತೀಚೆಗೆ ದ್ವಿಚಕ್ರ ವಾಹನ ಸವಾರರೊಬ್ಬರು ಮೊಬೈಲ್ಫೋನ್ನಲ್ಲಿ ಮಾತನಾಡುತ್ತಾ ಇನ್ನೊಂದು ವಾಹನವನ್ನು ಓವರ್ಟೇಕ್ ಮಾಡುವ ಸಂದರ್ಭದಲ್ಲಿ ಪಾದಚಾರಿ ಮಗುವಿಗೆ ಢಿಕ್ಕಿ ಹೊಡೆದಿತ್ತು.

ಗಂಭೀರವಾಗಿ ಗಾಯಗೊಂಡಿರುವ ಮಗು ಇನ್ನು 3 ತಿಂಗಳು ಮನೆಯೊಳಗೆ ಇರಬೇಕಾದ ಪರಿಸ್ಥಿತಿ ಬಂದಿದೆ. ಆದ್ದರಿಂದ ಮೊಬೈಲ್ನಲ್ಲಿ ಮಾತನಾಡುತ್ತಾ ವಾಹನ ಚಲಾಯಿಸುತ್ತಿರುವ ಸವಾರರ ಮೇಲೆ ಕ್ರಮ ಜರಗಿಸಬೇಕು ಎಂದು ಫೋನ್ ಕರೆ ಮಾಡಿದ ಮಹಿಳೆ ಮನವಿ ಮಾಡಿದರು.ಇದನ್ನು ಆಲಿಸಿದ ಕಮಿಷನರ್ ಈ ಕ್ರಮ ಕೈಗೊಂಡಿದ್ದಾರೆ.

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here