Saturday 5th, July 2025
canara news

ವಿಮಾನ ನಿಲ್ದಾಣದ ಶೌಚಾಲಯದಲ್ಲಿ ೩೭.೧೭ ಲಕ್ಷ ಮೌಲ್ಯದ ಚಿನ್ನದ ಬಿಸ್ಕೆಟ್ ಪತ್ತೆ

Published On : 04 Nov 2017   |  Reported By : Canaranews network


ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ವಿಭಾಗದ ಡಿ ಆರ್ ಐ ಅಧಿಕಾರಿಗಳು ವಿಮಾನ ನಿಲ್ದಾಣದ ಶೌಚಾಲಯದಲ್ಲಿ ಅಡಗಿಸಿ ಇಡಲಾಗಿದ್ದ 10 ಚಿನ್ನದ ಬಿಸ್ಕೆಟ್ ಗಳನ್ನು ಪತ್ತೆ ಹಚ್ಚಿ ವಶಪಡಿಸಿಕೊಂಡಿದ್ದಾರೆ.

ದುಬೈನಿಂದ ಮಂಗಳೂರಿಗೆ ಸ್ಪೈಸ್ ಜೆಟ್ ವಿಮಾನದಲ್ಲಿ ಬಂಧಿದ್ದ ಪ್ರಯಾಣಿಕನೊಬ್ಬ ಈ ಚಿನ್ನದ ಬಿಸ್ಕೆಟ್ ಗಳನ್ನು ತಂದಿದ್ದ ಎನ್ನಲಾಗಿದೆ. 1.16 ಕೆಜಿ ತೂಕದ ಒಟ್ಟು 10 ಚಿನ್ನದ ಬಿಸ್ಕೆಟ್ ಗಳನ್ನು ಪ್ಯಾಕೆಟ್ ಒಂದರಲ್ಲಿ ಹಾಕಿ ಮಂಗಳೂರು ಅಂತರರಾಷ್ಟ್ರೀಯ ನಿಲ್ದಾಣದ ಶೌಚಾಲಯದಲ್ಲಿ ಅಡಗಿಸಿ ಇಡಲಾಗಿತ್ತು . ಈ ಕುರಿತು ಖಚಿತ ಮಾಹಿತಿ ಪಡೆದ ಡಿ ಆರ್ ಐ ಅಧಿಕಾರಿಗಳು ಶೌಚಾಲಯದಲ್ಲಿ ಶೋಧ ಕಾರ್ಯ ನಡೆಸಿ ಅಕ್ರಮವಾಗಿ ತರಲಾಗಿದ್ದ 10 ಚಿನ್ನದ ಬಿಸ್ಕೆಟ್ ಗಳನ್ನು ವಶಪಡಿಸಿಕೊಂಡಿದ್ದಾರೆ.


ಶೌಚಾಲಯದಿಂದ ವಶಪಡಿಸಿಕೊಂಡಿರುವ ಚಿನ್ನದ ಒಟ್ಟು ಮೌಲ್ಯ 34 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ. ಶೌಚಾಲಯದಲ್ಲಿ ಇರಿಸಲಾಗಿದ್ದ ಚಿನ್ನದ ಬಿಸ್ಕೆಟ್ ಗಳನ್ನು ಹೊರಗೆ ಸಾಗಿಸುವಲ್ಲಿ ವಿಮಾನ ನಿಲ್ದಾಣದ ಗ್ರೌಂಡ್ ಸ್ಟಾಫ್ ಶಾಮೀಲಾಗಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಈ ನಿಟ್ಟಿನಲ್ಲಿ ಡಿ ಆರ್ ಐ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ . ಚಿನ್ನ ಸಾಗಾಟ ಮಾಡಿರುವ ವ್ಯಕ್ತಿಯ ಬಗ್ಗೆ ಅಧಿಕಾರಿಗಳು ಮಾಹಿತಿ ಕಲೆ ಹಾಕುತ್ತಿದ್ದಾರೆ.




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here