Saturday 10th, May 2025
canara news

ಎಸ್ ವೈ ಎಸ್ ಉಳ್ಳಾಲ ಸೆಂಟರ್ ಸಾಂತ್ವನ ವಿಭಾಗದ ಆಶ್ರಯದಲ್ಲಿ ಆರ್ಥಿಕವಾಗಿ ತೀರಾ ಹಿಂದುಳಿದ ಬಡ ಮುಅಲ್ಲಿಮ್ ಒಬ್ಬರ ಮನೆ ನಿರ್ಮಾಣ ಕಾಮಗಾರಿಗೆ ಸಿಮೆಂಟ್ ವಿತರಣಾ ಕಾರ್ಯಕ್ರಮ

Published On : 09 Nov 2017   |  Reported By : Bernard J Costa


ಎಸ್ ವೈ ಎಸ್ ಉಳ್ಳಾಲ ಸೆಂಟರ್ ಸಾಂತ್ವನ ವಿಭಾಗ ನಡೆಸುತ್ತಿರುವ ಬಡ ನಿರ್ಗತಿಕರ ಕಣ್ಣೀರೊಪ್ಪುವ ಸಾಂತ್ವನ ಕಾರ್ಯಕ್ರಮಗಳು ಎಲ್ಲರಿಗೂ ಮಾದರಿಯಾಗಿದೆ ಎಂದು ದ.ಕ ಜಿಲ್ಲಾ ಎಸ್ ವೈ ಎಸ್ ಕೋಶಾಧಿಕಾರಿ ಬಿ.ಜಿ ಹನೀಫ್ ಹಾಜಿ ತಿಳಿಸಿದರು. ಅವರು ಎಸ್ ವೈ ಎಸ್ ಉಳ್ಳಾಲ ಸೆಂಟರ್ ಸಾಂತ್ವನ ವಿಭಾಗದ ಆಶ್ರಯದಲ್ಲಿ ನಡೆದ ಆರ್ಥಿಕವಾಗಿ ತೀರಾ ಹಿಂದುಳಿದ ಬಡ ಮುಅಲ್ಲಿಮ್ ಒಬ್ಬರ ಮನೆ ನಿರ್ಮಾಣ ಕಾಮಗಾರಿಗೆ ಸಿಮೆಂಟ್ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಎಸ್ ವೈ ಎಸ್ ಉಳ್ಳಾಲ ಸೆಂಟರ್ ಅಧ್ಯಕ್ಷರಾದ ಸಯ್ಯಿದ್ ಜಲಾಲ್ ತಂಗಳ್ ಅಧ್ಯಕ್ಷತಾ ಭಾಷಣ ಮಾಡಿದರು. ಸುನ್ನೀ ಜಂಇಯ್ಯತುಲ್ ಉಲಮಾ ತಲಪಾಡಿ ಝೋನ್ ಇದರ ಉಪಾಧ್ಯಕ್ಷರಾದ ಬಶೀರ್ ಅಹ್ಸನಿ ತೋಡಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು.

ಪ್ರಸ್ತುತ ಕಾರ್ಯಕ್ರಮದಲ್ಲಿ ಎಸ್ ವೈ ಎಸ್ ಉಳ್ಳಾಲ ಸೆಂಟರ್ ಸಂಚಾಲಕರಾದ ಅಶ್ರಫ್ ಹಾಜಿ ಮುಕ್ಕಚ್ಚೇರಿ, ಸೆಂಟರ್ ಕೋಶಾಧಿಕಾರಿ ಇಸಾಕ್ ಪೇಟೆ, ಎಸ್ ವೈ ಎಸ್ ಮೇಲಂಗಡಿ ಬ್ರಾಂಚ್ ಅಧ್ಯಕ್ಷರಾದ ಬಶೀರ್ ಸಖಾಫಿ ಉಳ್ಳಾಲ, ಕೋಡಿ ಬ್ರಾಂಚ್ ಅಧ್ಯಕ್ಷರಾದ ಅಬ್ದುಲ್ ಹಮೀದ್ ಮುಸ್ಲಿಯಾರ್, ಸೆಂಟರ್ ಮಾಧ್ಯಮ ಕಾರ್ಯದರ್ಶಿ ನವಾಝ್ ಸಖಾಫಿ ಉಳ್ಳಾಲ, ಸೆಂಟರ್ ಜೊತೆ ಕಾರ್ಯದರ್ಶಿ ಇಲ್ಯಾಸ್ ಕೈಕೋ, ಸೆಂಟರ್ ಉಪಾಧ್ಯಕ್ಷರಾದ ಹೈದರ್ ಮುಕ್ಕಚ್ಚೇರಿ, ಫಾರೂಖ್ ಬೊಟ್ಟು, ಸೀದಿಯಬ್ಬ ಸುಂದರಭಾಗ್, ಅಶ್ರಫ್ ಯು.ಬಿ ಸುಂದರಭಾಗ್, ಅಮೀರ್ ತೊಕ್ಕೋಟು, ನೌಶಾದ್ ಕೋಡಿ, ಸತ್ತಾರ್ ಮೇಲಂಗಡಿ, ಅಕ್ಬರ್ ಮೇಲಂಗಡಿ ಉಪಸ್ಥಿತರಿದ್ದರು. ಎಸ್ ವೈ ಎಸ್ ಉಳ್ಳಾಲ ಸೆಂಟರ್ ಸಾಂತ್ವನ ವಿಭಾಗದ ಚೆಯರ್ಮಾನ್ ಅಲ್ತಾಫ್ ಕುಂಪಲ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಸಾಂತ್ವನ ವಿಭಾಗದ ಪ್ರಧಾನ ಕಾರ್ಯದರ್ಶಿ ಮನ್ಸೂರ್ ಹಳೆಕೋಟೆ ಧನ್ಯವಾದಗೈದರು.

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here