ಕುಂದಾಪುರ: ಇಲ್ಲಿನ ಅಗ್ನಿಶಾಮಕ ಠಾಣೆಯ ಆಶ್ರಯದಲ್ಲಿ ಕುಂದಾಪುರದ ಸೈಂಟ್ ಮೇರಿಸ್ ಪ್ರೌಢಶಾಲೆ, ಸೈಂಟ್ ಮೇರಿಸ್ ಪದವಿ ಪೂರ್ವ ಕಾಲೇಜಿನ ಸಹಯೋಗದಲ್ಲಿ ಬೆಂಕಿ ಆಕಸ್ಮಿಕ ಮತ್ತು ಸುರಕ್ಷತೆಯ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ಮಂಗಳವಾರ ಜರುಗಿತು.
ಅಗ್ನಿ ಶಾಮಕ ಠಾಣೆಯ ಠಾಣಾಧಿಕಾರಿ,ರಾಷ್ಟ್ರ ಪ್ರಶಸ್ತಿ ಪುರಸ್ಕøತ ವೆಂಕಟರಮಣ ಮೊಗೇರ ಬೆಂಕಿ ಆಕಸ್ಮಿಕ ಮತ್ತು ಸುರಕ್ಷತೆಯ ಬಗ್ಗೆ ವಿವರಿಸಿದರು.
ಸಮಾರಂಭದ ಅಧ್ಯಕ್ಷತೆಯನ್ನು ಸೈಂಟ್ ಮೇರಿಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಫಾ. ಪ್ರವೀಣ ಅಮೃತ್ ಮಾರ್ಟಿಸ್ ವಹಿಸಿದ್ದರು. ವೇದಿಕೆಯಲ್ಲಿ ಸೈಂಟ್ ಮೇರಿಸ್ ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಚೇತನಾ ಉಪಸ್ಥಿತರಿದ್ದರು.
ಸಹಾಯಕ ಠಾಣಾಧಿಕಾರಿ ನವೀನ್, ಸಿಬ್ಬಂದಿಗಳಾದ ರಾಘವೇಂದ್ರ ಶೆಟ್ಟಿ, ನಾಗರಾಜ ಪೂಜಾರಿ, ರಾಘವೇಂದ್ರ ಆಚಾರಿ, ಗೋಪಾಲ ಪ್ರಾತ್ಯಕ್ಷಿಕೆ ನಡೆಸಿಕೊಟ್ಟರು. ಶಿಕ್ಷಕ ಚಂದ್ರಶೇಖರ ಬೀಜಾಡಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.