Sunday 19th, November 2017
canara news

ಕರೋಪಾಡಿ ಜಲೀಲ್ ಕೊಲೆ ಪ್ರಕರಣದ ಆರೋಪಿಗೆ ಷರತ್ತುಬದ್ಧ ಜಾಮೀನು

Published On : 12 Nov 2017   |  Reported By : Canaranews network


ಮಂಗಳೂರು: ಬಂಟ್ವಾಳ ತಾಲೂಕಿನ ಕರೋಪಾಡಿ ಪಂಚಾಯತ್ನ ಮಾಜಿ ಉಪಾಧ್ಯಕ್ಷ ಅಬ್ದುಲ್ ಜಲೀಲ್ ಕೊಲೆ ಪ್ರಕರಣದ ೧೨ನೇ ಆರೋಪಿಗೆ ಬಂಟ್ವಾಳ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಪ್ರಕರಣದ ಆರೋಪಿ ಲಕ್ಷ್ಮಣ ಮಾಂಬಾಡಿ ಎಂಬಾತನಿಗೆ ಬಂಟ್ವಾಳದ ಜೆ.ಎಮ್.ಎಫ಼್.ಸಿ ನ್ಯಾಯಾಲಯದ ನ್ಯಾಯಾಧೀಶೆ ಪ್ರತಿಭಾ ಡಿ.ಎಸ್ ರವರು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದಾರೆ.

ಏಪ್ರಿಲ್ ೨೦ರಂದು ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮ ಪಂಚಾಯತ್ನ ಉಪಾಧ್ಯಕ್ಷ ಅಬ್ದುಲ್ ಜಲೀಲ್ನನ್ನು ಪಂಚಾಯತ್ ಕಚೇರಿಗೆ ನುಗ್ಗಿ ಬರ್ಬರವಾಗಿ ಕೊಲೆ ಮಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರಂಭದಲ್ಲಿ ವಿಟ್ಲ ಪೋಲಿಸ್ ಠಾಣೆಯಲ್ಲಿ ಕೊಲೆ ಪ್ರಕರಣವನ್ನು ದಾಖಲಿಸಿಕೊಂಡಿದ್ದರು. ನಂತರ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ೧೨ ಆರೋಪಿಗಳನ್ನು ಬಂಧಿಸಿದ್ದರು ಮತ್ತು ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು.
More News

ಮಂಗಳೂರಿಗೆ ಕಾದಿದೆ ಅಪಾಯ!
ಮಂಗಳೂರಿಗೆ ಕಾದಿದೆ ಅಪಾಯ!
ಬಂಟ್ವಾಳದಲ್ಲಿ ಗರ್ಭಿಣಿ ಮಹಿಳೆ ಮೇಲೆ ಬೀದಿ ನಾಯಿಗಳ ದಾಳಿ
ಬಂಟ್ವಾಳದಲ್ಲಿ ಗರ್ಭಿಣಿ ಮಹಿಳೆ ಮೇಲೆ ಬೀದಿ ನಾಯಿಗಳ ದಾಳಿ
15 ಮಂದಿ ಸಾಧಕರಿಗೆ 2017ರ 'ಆಳ್ವಾಸ್ ನುಡಿಸಿರಿ' ಪುರಸ್ಕಾರ
15 ಮಂದಿ ಸಾಧಕರಿಗೆ 2017ರ 'ಆಳ್ವಾಸ್ ನುಡಿಸಿರಿ' ಪುರಸ್ಕಾರ

Comment Here