Friday 19th, April 2024
canara news

ಕುಂದಾಪುರ ಕಾಂಗ್ರೇಸ್ : ಮಕ್ಕಳ ದಿನಾಚರಣೆ

Published On : 14 Nov 2017   |  Reported By : Bernard D'Costa


ದೇಶದ ಪ್ರಗತಿಯಲ್ಲಿ ನೆಹರೂ ಕೊಡುಗೆ ದೊಡ್ಡದು : ಬಿ. ಹಿರಿಯಣ್ಣ

ಜವಾಹರ್ ಲಾಲ್ ನೆಹರೂರವರು 1929ರಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೇಸ್‍ನ ರಾಷ್ಟ್ರೀಯ ಅಧÀ್ಯಕ್ಷರಾಗಿ ಆಯ್ಕೆಗೊಂಡ ನಂತರ ತನ್ನ ಕುಟುಂಬದ ಹೆಚ್ಚಿನ ಆಸ್ತಿಯನ್ನು ಮಾರಾಟ ಮಾಡಿ ಸ್ವಾತಂತ್ರ್ಯ ಚಳುವಳಿಗೆ ವಿನಿಯೋಗಿಸಿದರು. ಮತ್ತು ತದನಂತರ ಬ್ರಿಟಿಷರ ವಿರುದ್ಧದ ಸ್ವಾತಂತ್ರ್ಯ ಚಳುವಳಿಯನ್ನು ಮಹಾತ್ಮ ಗಾಂಧೀಜಿಯವರ ಮಾರ್ಗದರ್ಶನದಲ್ಲಿ ಬಿರುಸುಗೊಳಿಸಿದರು. 1947ರಲ್ಲಿ ಸ್ವತಂತ್ರಭಾರತದ ಮೊತ್ತಮೊದಲ ಪ್ರಧಾನಿಯಾಗಿ ನೇಮಕಗೊಂಡ ಅವರ ವಿದೇಶಿ ನೀತಿ, ಆರ್ಥಿಕ ಸುಧಾರಣಾ ಕ್ರಮಗಳು, ಪಂಚವಾರ್ಷಿಕ ಯೋಜನೆಗಳು, ಅಲಿಪ್ತನೀತಿ, ಕೃತಿ ನೀತಿ, ಕೈಗಾರಿಕಾ ನೀತಿ, ಮಿಲಿಟರಿ ನೀತಿ ಮುಂತಾದವುಗಳೇ ಇಂದು ಈ ದೇಶ ಪ್ರಪಂಚದ ಪ್ರಮುಖ ರಾಷ್ಟ್ರಗಳ ಸಾಲಿಗೆ ಸೇರಲು ಕಾರಣವಾಗಿದೆ. ದೇಶದ ಅತಿದೊಡ್ಡ ರಾಜಕೀಯ ನಾಯಕರಾಗಿದ್ದ ಅವರು ಸಣ್ಣ ಸಣ್ಣ ಮಕ್ಕಳನ್ನು ಅತಿಯಾಗಿ ಪ್ರೀತಿಸುತ್ತಿದ್ದರು. ಆ ಕಾರಣಕ್ಕಾಗಿ ಅವರ ಹುಟ್ಟುದಿನವಾದ ನವೆಂಬರ್ 14ನ್ನು ಮಕ್ಕಳ ದಿನಾಚರಣೆಯಾಗಿ ಆಚರಿಸಲಾಗುತ್ತಿದೆ ಎಂದು ಕರ್ನಾಟಕ ರಾಜ್ಯ ಮೀನುಗಾರಿಕಾ ನಿಗಮದ ಮಾಜಿ ಅಧ್ಯಕ್ಷ ಬಿ. ಹಿರಿಯಣ್ಣ ಹೇಳಿದ್ದಾರೆ.

ಅವರು ಇಂದು ಕುಂದಾಪುರ ಬ್ಲಾಕ್ ಕಾಂಗ್ರೇಸ್ ಕಛೇರಿಯಲ್ಲಿ ನಡೆದ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಮಲ್ಯಾಡಿ ಶಿವರಾಮ ಶೆಟ್ಟಿ, ಕಾರ್ಯದರ್ಶಿ ನಾರಾಯಣ ಆಚಾರ್, ಶಿವಾನಂದ ಕೆ., ನಗರ ಪ್ರಾಧಿಕಾರದ ಅಧ್ಯಕ್ಷ ವಿಕಾಸ್ ಹೆಗ್ಡೆ, ಎಪಿಎಂಸಿ ಉಪಾಧ್ಯಕ್ಷ ಗಣೇಶ ಸೇರೆಗಾರ್, ಕಾಂಗ್ರೇಸ್ ಐಟಿ ಸೆಲ್ ರಾಜ್ಯ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ಶೆಟ್ಟಿ, ಮಾಜಿ ಪುರಸಭಾಧ್ಯಕ್ಷೆ ದೇವಕಿ ಸಣ್ಣಯ್ಯ, ಜಿಲ್ಲಾ ಯುವ ಕಾಂಗ್ರೇಸ್ ಪ್ರಧಾನ ಕಾರ್ಯದರ್ಶಿ ವಕ್ವಾಡಿ ರಮೇಶ್ ಶೆಟ್ಟಿ, ಪುರಸಭಾ ಸದಸ್ಯರಾದ ಕೇಶವ ಭಟ್, ಚಂದ್ರ ಅಮೀನ್, ಮುಖಂಡರುಗಳಾದ ವಿಠಲ ಕಾಂಚನ್, ಆನಂದ ಸಾರಂಗ, ಶಶಿಧರ ಕಾಂಚನ್ ಮುಂತಾದವರು ಉಪಸ್ಥಿತರಿದ್ದರು.

 




More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here